ಚಿತ್ರದುರ್ಗ: ಕ್ಯಾನ್ಸರ್ನಂಥ ಹತ್ತಾರು ಮಾರಕ ಕಾಯಿಲೆಗಳಿಗೆ ಕಾರಣವಾಗುವ ತಂಬಾಕು ಸೇವನೆ ಹದಿಹರೆಯದಿಂದಲೇ ಆರಂಭವಾಗುತ್ತಿದೆ ಎಂದು ಶಿವಮೊಗ್ಗ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಶಸ್ತ್ರ ಚಿಕಿತ್ಸಾ ತಜ್ಞ ಡಾ.ರೋಷನ್ ಬಿ.ಎ.ರಾವ್ ಕಳವಳ ವ್ಯಕ್ತಪಡಿಸಿದರು.
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ಎಸ್ಜೆಎಂ ಕ್ಯಾಂಪಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಸವೇಶ್ವರ ವೈದ್ಯಕೀಯ ಕಾಲೇಜಿನ ಡಾ.ಉಮಾಪತಿ ಇದ್ದರು.