More

    ವಿಶೇಷ ಪ್ಯಾಕೇಜ್‌ಗೆ ಆಗ್ರಹಿಸಿ ಪ್ರತಿಭಟನೆ

    ಚಿತ್ರದುರ್ಗ: ಲಾಕ್‌ಡೌನ್‌ನಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ರೂಪಿಸಬೇಕೆಂದು ಒತ್ತಾ ಯಿಸಿ ಜಿಲ್ಲಾ ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರು ಸೋಮವಾರ ಪ್ರತಿಭಟನೆ ನಡೆಸಿದರು.

    ಕೋವಿಡ್ ಕಾರಣದಿಂದಾಗಿ ಶಿಕ್ಷಣ ಸಂಸ್ಥೆಗಳು ಮುಚ್ಚಿವೆ. ವೇತನವಿಲ್ಲದೆ ರಾಜ್ಯದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಸಾವಿರಾರು ಬೋಧಕ, ಬೋಧಕೇತರ ಸಿಬ್ಬಂದಿ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ.

    ಆದ್ದರಿಂದ ಸರ್ಕಾರ ವಿಶೇಷ ಪ್ಯಾಕೇಜ್ ಮೂಲಕ ನೊಂದ ಶಿಕ್ಷಕರು, ಸಿಬ್ಬಂದಿಗೆ ನೆರವಾಗಬೇಕು, ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಈ ಬಗ್ಗೆ ಗಮನ ಹರಿಸಬೇಕು. ಶಾಲೆ ಆರಂಭವಾಗುವವರೆಗೆ ಪ್ರತಿ ತಿಂಗಳು ವೇತನ ನೀಡಬೇಕು ಹಾಗೂ ಶಿಕ್ಷಕರ ನೇರ ನೇಮಕ ಪರೀಕ್ಷೆಯಲ್ಲಿ ಅನುಭವಿಗಳಿಗೆ ಕೃಪಾಂಕ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

    ಶಿಕ್ಷಕರಾದ ಬಿ.ಗೌರೀಶ, ಎಚ್.ನಾಗಭೂಷಣ, ಜಿ.ಚಿದಾನಂದ, ಯಾದಲಗಟ್ಟೆ ಜಗನ್ನಾಥ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts