More

    ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ್ ಕಾರಜೋಳ!

    ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ತನ್ನ 7ನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 2 ರಾಜ್ಯಗಳ ಇಬ್ಬರು ಅಬ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಚಿತ್ರದುರ್ಗ ಕ್ಷೇತ್ರಕ್ಕೆ ಮಾಜಿ ಸಚಿವ ಗೋವಿಂದ ಕಾರಜೋಳ ಟಿಕೆಟ್ ಘೋಷಣೆ ಮಾಡಲಾಗಿದೆ.

    ಇದನ್ನೂ ಓದಿ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದ್ರೆ ಐವರು ಶಾಸಕರಿಂದ ರಾಜೀನಾಮೆ: ನೋ ಕಮೆಂಟ್​ ಎಂದ ಕೆಎಚ್​

    ಹಾಲಿ ಸಂಸದ ನಾರಾಯಣಸ್ವಾಮಿ ಅವರಿಗೆ ಕೊಕ್ ನೀಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಪ್ತ, ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರಿಗೆ ಬಿಜೆಪಿ ಹೈಕಮಾಂಡ್​ ಮಣೆ ಹಾಕಿದೆ.

    ಮೂರು ಮಾಜಿ ಸಚಿವರಿಗೆ ಟಿಕೆಟ್​ ಘೋಷಣೆ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಏಪ್ರಿಲ್‌ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಹೊಸ ಪ್ರಯೋಗ ಮಾಡಲು ಮುಂದಾಗಿದೆ. ಹಾಲಿ ಸಂಸದರ ಬದಲು ಟಿಕೆಟ್‌ ಸಿಕ್ಕವರ ಪೈಕಿ ರಾಜಕಾರಣಕ್ಕೆ ಹೊಸಬರು ಇರುವುದು ಅಚ್ಚರಿ ಮೂಡಿಸಿದೆ. ಮುಖ್ಯವಾಗಿ ಬಿಜೆಪಿ ಪ್ರಭಾವಿ ನಾಯಕರು, ಮಾಜಿ ಸಚಿವರಾದ ಶ್ರೀರಾಮುಲು, ಡಾ.ಕೆ ಸುಧಾಕರ್, ಬಿಎಸ್​ವೈ ಆಪ್ತರಾದ ಗೋವಿಂದ್​ ಕಾರಜೋಳ ಅವರಿಗೆ ಟಿಕೆಟ್ ಘೋಷಿಸಿದೆ.

    ಕಾರಜೋಳ ಅವರಿಗೆ ಟಿಕೆಟ್​ ನೀಡಲು ಇದೊಂದು ಕಾರಣ: ಸಾಮಾಜಿಕ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ತಾವು ಸ್ಪರ್ಧಿಸುವುದಿಲ್ಲ ಎಂದು ಹಿಂದೆ ಸರಿದ ನಂತರ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಹೆಸರು ಮುಂಚೂಣಿಗೆ ಬಂದಿದೆ. ನಾರಾಯಣಸ್ವಾಮಿ ತಾವು ಸ್ಫರ್ಧಿಸದಿದ್ದರೂ, ಎಡಗೈ ಸಮುದಾಯಕ್ಕೆ ಟಿಕೆಟ್‌ ನೀಡಬೇಕು ಎಂದು ಪಕ್ಷದ ಮೇಲೆ ಒತ್ತಡ ಹಾಕಿದ್ದಾರೆನ್ನಲಾಗಿದೆ. ಇದರ ಫಲವಾಗಿಯೇ ಗೋವಿಂದ ಕಾರಜೋಳ ಹೆಸರನ್ನು ಬಿಜೆಪಿ ಹೈಕಮಾಂಡ್​ ಅಂತಿಮಗೊಳಿಸಿದೆ ಎನ್ನಲಾಗಿದೆ.

    ಲೋಕಸಭಾ ಚುನಾವಣೆ: ಮೊದಲ ದಿನವೇ ರಾಮನಗರದಲ್ಲಿ ಡಿಕೆ ಸುರೇಶ್‌ ನಾಮಿನೇಷನ್‌ ಸಲ್ಲಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts