More

    ಕೃಷಿ ನೆರವಿಗೆ ಇಲಾಖೆ ಸಿದ್ಧ

    ಚಿತ್ರದುರ್ಗ: ಮುಂಗಾರು ಕೃಷಿ ಚಟುವಟಿಕೆ ಪೂರಕವಾಗಿ ಬಿತ್ತನೆ ಬೀಜ ವಿತರಣೆ, ರಸಗೊಬ್ಬರ ದಾಸ್ತಾನು, ಕೃಷಿ ಯಂತ್ರೋಪಕರಣಗಳ ಸಹಿತ ಕೃಷಿ ಹಲವು ಸಿದ್ಧತೆಗಳನ್ನು ಕೈಗೊಳ್ಳುವ ಮೂಲಕ ರೈತರಿಗೆ ನೆರವಿಗೆ ಸಜ್ಜಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ವಿ.ಸದಾಶಿವ ಹೇಳಿದರು.

    ವಾರ್ತಾ ಇಲಾಖೆಯಲ್ಲಿ ಬುಧವಾರ ಫೋನ್‌ಇನ್ ಕಾರ್ಯಕ್ರಮದಲ್ಲಿ ಮಾತನಾಡಿ, ಲಾಕ್‌ಡೌನ್ ವೇಳೆ ಕೃಷಿ ಚಟುವಟಿಕೆಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಳಿಗೆ, 22 ಕೃಷಿ ಯಂತ್ರಧಾರೆ ಕೇಂದ್ರಗಳು, ಕೃಷಿ ಕೊಯ್ಲು ಯಂತ್ರ, ಕೃಷಿ ಉತ್ಪನ್ನ ಸಾಗಾಟ, ಯಂತ್ರಗಳ ರಿಪೇರಿ ಕೇಂದ್ರ, 324 ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಅನುಮತಿ ನೀಡಲಾಗಿದೆ.

    22 ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅಗತ್ಯ ಸೇವೆ ಒದಗಿಸಲಾಗುತ್ತಿದೆ. ಸಿರಿಧಾನ್ಯ ಬೆಳೆ ಪ್ರೋತ್ಸಾಹ ಯೋಜನೆ ಜಾರಿಯಲ್ಲಿದೆ. ಬಬ್ಬೂರಲ್ಲಿ ಸಿರಿಧಾನ್ಯ ಸಂಸ್ಕರಣೆ ಘಟಕ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಹೊಸದುರ್ಗದಲ್ಲಿ ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೃಷಿ ಸಮ್ಮಾನ್ ಯೋಜನೆಯಡಿ ಜಿಲ್ಲೆಯ 1.69 ಲಕ್ಷ ರೈತರು ನೋಂದಾಯಿಸಿದ್ದು, ಮೊದಲ ಕಂತು ಜಮಾ ಪ್ರಕ್ರಿಯೆ ಪ್ರಾರಂಭವಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 3,62,340 ಹೆ.ವಿಸ್ತೀರ್ಣದ ಬಿತ್ತನೆ ಗುರಿ ಇದೆ. 16557 ಟನ್ ರಸಗೊಬ್ಬರ ದಾಸ್ತಾನಿದೆ. ರೈತ ಸಂಪರ್ಕ ಕೇಂದ್ರಗಳು ಹಾಗೂ 59 ಹೆಚ್ಚುವರಿ ವಿತರಣಾ ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಣೆಗೆ ಕ್ರಮ ವಹಿಸಲಾಗಿದೆ ಎಂದರು.

    ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಓಂಕಾರಪ್ಪ ಮಾತನಾಡಿ, ರೈತರು ಈಗಲಾದರೂ ಎಚ್ಚೆತ್ತು ಸಮಗ್ರ ಬೆಳೆ ಪದ್ಧತಿ ಅನುಸರಿಸಬೇಕೆಂದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಜ್, ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯಪ್ಪ, ವಾರ್ತಾ ಸಹಾಯಕ ಬಿ.ವಿ.ತುಕಾರಾಂರಾವ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts