23.9 C
Bangalore
Friday, December 6, 2019

ಒಳ್ಳೆಯತನ ವೃದ್ಧಿಗೆ ಭಗವದ್ಗೀತೆ ಉತ್ತಮ ಕೈಪಿಡಿ

Latest News

ಡಿ.31 ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಎಲಿಯಂಗಾಡ್ ಫ್ರೆಂಡ್ಸ್ ಯುವಕ ಸಂಘದ ವತಿಯಿಂದ 2ನೇ ವರ್ಷದ ಹೊನಲು...

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ...

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಚಿತ್ರದುರ್ಗ: ಸ್ವಭಾವದಲ್ಲಿ ಒಳ್ಳೆಯತನವನ್ನು ಮತ್ತಷ್ಟು ವೃದ್ಧಿಸಿಕೊಳ್ಳಲು ಭಗವದ್ಗೀತೆ ಉತ್ತಮ ಕೈಪಿಡಿಯಾಗಿದೆ ಎಂದು ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ತಾಲೂಕಿನ ಮುತ್ತಯ್ಯನಹಟ್ಟಿಯ ರಾಜರಾಜೇಶ್ವರಿ ದೇಗುಲದಲ್ಲಿ ಭಾನುವಾರ ಭಗವದ್ಗೀತಾ ಅಭಿಯಾನ ಕರ್ನಾಟಕ, ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ, ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಭಗವದ್ಗೀತಾ ಕಾರ್ಯಾಗಾರದಲ್ಲಿ ಮಾತನಾಡಿದರು.

ನಿರಂತರ ಪಠಣದಿಂದ ವ್ಯಕ್ತಿತ್ವ ವಿಕಸನ, ಸೌಹಾರ್ದ, ಸಹಬಾಳ್ವೆ ಹಾಗೂ ಮಾನಸಿಕ ದೃಢತೆ ಸಾಧಿಸಬಹುದಾಗಿದೆ. 2007ರಿಂದ ಅಭಿಯಾನದ ಮೂಲಕ ಭಗವದ್ಗೀತೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಈ ವರ್ಷ ನಡತೆ ಸುಧಾರಣೆಯಾಗಲು 16ನೇ ಅಧ್ಯಾಯವನ್ನು ಕೇಂದ್ರೀಕೃತಗೊಳಿಸಲಾಗಿದೆ ಎಂದರು.

ನಮ್ಮ ನಡತೆಯ ಒಳ್ಳೆಯತನ, ಕೆಟ್ಟತನಗಳು ಭಗವದ್ಗೀತೆ ಪಠಣದಿಂದ ಅರ್ಥವಾಗಲಿವೆ. ಆದ್ದರಿಂದ ಪ್ರತಿಯೊಬ್ಬರು ಅಧ್ಯಯನ ಮಾಡಬೇಕು ಎಂದು ಹೇಳಿದರು.

ಮಸೀದಿ, ಚರ್ಚ್‌ಗಳಲ್ಲಿ ಆಯಾ ಧರ್ಮಗ್ರಂಥದ ಪಠಣ ನಡೆಯುತ್ತವೆ. ಆದರೆ ಹಿಂದು ದೇಗುಲಗಳಲ್ಲಿ ಮಾತ್ರ ಧರ್ಮಗ್ರಂಥ ಪಠಣ ನಡೆಯುತ್ತಿಲ್ಲ. ಇನ್ನಾದರೂ ಪರಿಸ್ಥಿತಿ ಬದಲಾಗಿ ಧರ್ಮ ಗ್ರಂಥದ ಪಠಣದ ವಾತಾವರಣ ನಿರ್ಮಾಣವಾಗಬೇಕು ಎಂದರು.

ಅಭಿಯಾನದ ಮಹಾಸಮರ್ಪಣೆ ಡಿಸೆಂಬರ್ 7ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. ರಾಜ್ಯದ ವಿವಿಧೆಡೆಯಿಂದ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸ್ವರ್ಣವಲ್ಲಿ ಮಠದ ಆಡಳಿತ ಮಂಡಳಿ ಸದಸ್ಯ ಗಂಗಾಧರ್ ಹೆಗಡೆ ಕಡಕಿನಬೈಲು ಮಾತನಾಡಿ, ಅಕ್ಟೋಬರ್ 30 ರಿಂದ ಡಿಸೆಂಬರ್ 4ರ ವರೆಗೆ ನಡೆಯುವ ಅಭಿಯಾನಕ್ಕೆ ಜಿಲ್ಲಾ ಮತ್ತು ತಾಲೂಕು ಸಮಿತಿ ರಚಿಸಲಾಗಿದೆ. ಶಿಕ್ಷಕರು ಹೆಚ್ಚಿನ ಜವಾಬ್ದಾರಿ ಹೊತ್ತು ಅಭಿಯಾನ ಯಶಸ್ವಿಗೊಳಿಸಲು ಕೈ ಜೋಡಿಸಬೇಕು ಎಂದು ಹೇಳಿದರು.

ಭಗವದ್ಗೀತೆ ಅಭಿಯಾನದ ರಾಜ್ಯ ಸಂಚಾಲಕ ಅನಂತ್ ಹೆಗಡೆ ಆಶೀಸರ ಮಾತನಾಡಿ, ಜಿಲ್ಲೆಯ ಪ್ರತಿಯೊಬ್ಬರಿಗೂ ಭಗವದ್ಗೀತೆ ತಲುಪಬೇಕು. ಅಭಿಯಾನದ ಸದಸ್ಯರು ಪ್ರತಿ ಗ್ರಾಮ, ಶಾಲೆ, ದೇವಸ್ಥಾನಗಳಿಗೆ ತೆರಳಿ ತಮಗೆ ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಅಭಿಯಾನ ಸಮಿತಿ ಕಾರ್ಯಾಧ್ಯಕ್ಷ ಕಾಶಿ ವಿಶ್ವನಾಥ ಶೆಟ್ಟಿ, ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ್, ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ರಾಜರಾಜೇಶ್ವರಿ ದೇಗುಲದ ಅರ್ಚಕ ನಾಗರಾಜ್ ಭಟ್, ಡಾ.ರಾಜೀವಲೋಚನ, ಉದ್ಯಮಿ ಪ್ರಭಾಕರ್ ಉಪಸ್ಥಿತರಿದ್ದರು.

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...