22.5 C
Bengaluru
Sunday, January 19, 2020

ಅಧ್ಯಯನದಿಂದ ಪ್ರಬುದ್ಧತೆ ಲಭ್ಯ

Latest News

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ: ನಗರದ ಹಿಲ್ ರೋಡ್ ಅಂಗನವಾಡಿಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ...

ಶೇ.95ರಷ್ಟು ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳನ್ನು ಮಾರಕ ಪೊಲೀಯೋ ಕಾಯಿಲೆಯಿಂದ ದೂರವಿಡಲು ಜಿಲ್ಲೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯನ್ನು ಪೊಲೀಯೋ ಮುಕ್ತಗೊಳಿಸಲು ಪಣತೊಟ್ಟಿರುವ ಆರೋಗ್ಯ...

ಎಂ.ಎಸ್​. ಧೋನಿ ಹಿಂದಿಕ್ಕಿದ ವಿರಾಟ್​ ಕೊಹ್ಲಿ: ಕೊಹ್ಲಿಗೆ ಸರಿಸಮಾನಾಗಿ ನಿಂತ ರೋಹಿತ್​ ಶರ್ಮ!

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲುವು...

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಚಿತ್ರದುರ್ಗ: ಪತ್ರಕರ್ತರಾಗುವುದು ಸುಲಭ. ಆದರೆ, ವೃತ್ತಿ ಪ್ರಬುದ್ಧತೆಗೆ ಅಧ್ಯಯನ, ಅನುಭವ ಮುಖ್ಯವೆಂದು ಚಿತ್ರದುರ್ಗ ಮುರುಘಾಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಜಿಲ್ಲಾ ಪತ್ರಕರ್ತರ ಸಂಘ ನಗರದ ಪತ್ರಿಕಾಭವನದಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ದೇಶಿಸಿ ಮಾತನಾಡಿ, ಅಧ್ಯಯನ, ಅನುಭವದಿಂದ ಬರವಣಿಗೆ ಶ್ರೀಮಂತವಾಗುತ್ತದೆ. ಅಡ್ಡಿ, ಅಂಜಿಕೆಗಳಿದ್ದರೆ ಪತ್ರಕರ್ತನ ಹಾದಿ ಕಠಿಣ ಎಂದರು.

ಎಲ್ಲ ಕ್ಷೇತ್ರಗಳಲ್ಲೂ ಬೆದರಿಕೆಯ ಅಭಿವ್ಯಕ್ತಿ ಕಾಣುತ್ತಿದ್ದೇವೆ. ಪತ್ರಕರ್ತರು ಈ ಸವಾಲನ್ನು ನಿತ್ಯ ಎದುರಿಸುತ್ತಿದ್ದಾರೆ. ಇದರಿಂದಾಗಿ ನಾವಿಂದು ಮಾಧ್ಯಮದಲ್ಲಿ ಬಿಕ್ಕಟ್ಟು ಕಾಣುವಂತಾಗಿದೆ.

ವ್ಯಂಗ್ಯ, ರೋಚಕತೆಗೆ ಕಡಿವಾಣ ಬಿದ್ದರೆ ಮುಕ್ತ ಅಭಿವ್ಯಕ್ತಿ ಸಾಧ್ಯ. ಇದಕ್ಕೆ ಸತ್ಯವನ್ನು ದರ್ಶಿಸುವ ಶಕ್ತಿ ಇದ್ದು, ಮುಕ್ತ ಅಭಿವ್ಯಕ್ತಿಯಲ್ಲಿ ಗೊಂದಲಗಳಾದರೆ ಸಾಮಾಜಿಕ ಸಮಾತೆಗೆ ಧಕ್ಕೆಯಾಗುತ್ತದೆ ಎಂದು ಎಚ್ಚರಿಸಿದರು.

ಅಂಜಿಕೆಯಿಂದಲೇ ಬರೆಯಬೇಕಾಗಿರುವ ಪತ್ರಕರ್ತರಿಗೂ ಬದುಕು, ಭಾವನೆಗಳಿವೆ. ತಲ್ಲಣಗಳಿಂದಾಗಿ ಆರೋಗ್ಯ ಹದಗೆಟ್ಟರೆ ಸಮಾಜ, ಪ್ರಜಾಪ್ರಭುತ್ವದ ಆರೋಗ್ಯವನ್ನು ಕಾಪಾಡುವವರು ಯಾರು? ಒಳ್ಳೆಯ ಆರೋಗ್ಯ, ಅಧ್ಯಯನ ಹಾಗೂ ಅನುಭವದ ಮೂಲಕ ಸಮಾಜಕ್ಕೆ ಪತ್ರಕರ್ತರು ನ್ಯಾಯ ಒದಗಿಸಬೇಕು ಎಂದರು.

ಚಿಂತಕ ಬರಗೂರು ರಾಮಚಂದ್ರಪ್ಪ ಸಮಾರಂಭ ಉದ್ಘಾಟಿಸಿದರು. ರಾಜ್ಯ ನಿರ್ದೇಶಕ ನರೇನಹಳ್ಳಿ ಅರುಣ್‌ಕುಮಾರ್ ಪ್ರಾಸ್ತಾ ವಿಕವಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಲಕ್ಷ್ಮಣ್ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರಾದ ಟಿ.ಕೆ.ಬಸವರಾಜ್, ಮೇಘಗಂಗಾಧರ ನಾಯ್ಕ ಇತರರಿದ್ದರು. ದಿನೇಶ್ ಗೌಡಗೆರೆ ಸ್ವಾಗತಿಸಿದರು. ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ವೇಳೆ ಗೌರವಿಸಲಾಯಿತು.

ಮಾಧ್ಯಮಗಳಿಗೆ ಆತ್ಮಾವಲೋಕನ ಸಮಯ: ರಾಜ್ಯದ ಪ್ರಸ್ತುತ ಪರಿಸ್ಥಿತಿ ಗಮನಿಸಿದರೆ ಇದು ಮಾಧ್ಯಮಗಳಿಗೆ ಆತ್ಮಾವಲೋಕನ ಸಮಯವೂ ಆಗಿದೆ ಎಂದು ಚಿಂತಕ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಪತ್ರಿಕೆ, ಟಿವಿ, ಚಲನಚಿತ್ರ, ಪುಸ್ತಕ ಮಾಧ್ಯಮಗಳ ನಡುವಿನ ಸ್ಪರ್ಧೆ ಆರೋಗ್ಯಕರವಾಗಿರಬೇಕು. ನಾವಿಂದು ತಾಂತ್ರಿಕ ಪ್ರಜಾಪ್ರಭುತ್ವದಲ್ಲಿ ಇದ್ದೇವೆ ಹೊರತು, ತಾತ್ವಿಕ ಪ್ರಜ್ಞಾಪ್ರಭುತ್ವದಲ್ಲಿ ಅಲ್ಲ ಎಂದು ಬೇಸರಿಸಿದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...