More

  ಪ್ಯಾಕೆಟ್ ಕ್ಯಾಲೆಂಡ್ ಬಿಡುಗಡೆ

  ಚಿತ್ರದುರ್ಗ: ಜಿಪಂ ಸಭಾಂಗಣದಲ್ಲಿ ಜ.12ರ ಬೆಳಗ್ಗೆ 10.30ಕ್ಕೆ ನೂತನ ವರ್ಷದ ಡೈರಿ ಹಾಗೂ ಪ್ಯಾಕೆಟ್ ಕ್ಯಾಲೆಂಡರ್ ಬಿಡುಗಡೆ ಮತ್ತು ವಾರ್ಷಿಕ ಮಹಾಸಭೆಯನ್ನು ಜಿಲ್ಲಾ ಸರ್ಕಾರಿ ವಾಹನ ಚಾಲಕರ ಸಂಘ ಹಮ್ಮಿಕೊಂಡಿದೆ.

  ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಎನ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು.

  ಡಿಸಿ ಆರ್.ವಿನೋತ್ ಪ್ರಿಯಾ ಡೈರಿ ಹಾಗೂ ಜಿಪಂ ಸಿಇಒ ಸಿ.ಸತ್ಯಭಾಮಾ ಕ್ಯಾಲೆಂಡರ್ ಬಿಡುಗಡೆ ಮಾಡುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಸರ್ಕಾರಿ ವಾಹನ ಚಾಲಕರ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಜಿ.ಜಗದೀಶ್ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts