More

    ದುರ್ಗದಲ್ಲಿ ಬಸ್ ಸಂಚಾರ ಆರಂಭ

    ಚಿತ್ರದುರ್ಗ: ಕರೊನಾ ಎಫೆಕ್ಟ್ ಕಾರಣದಿಂದ ಒಂದೂವರೆ ತಿಂಗಳಿಂದ ಸ್ಥಗಿತಗೊಂಡಿದ್ದ ಸರ್ಕಾರಿ ಬಸ್ ಸಂಚಾರ ಸೋಮವಾರ ಬೆಳಗ್ಗೆ 10.30ಕ್ಕೆ ಆರಂಭವಾಯಿತು.

    ಪ್ರಯಾಣಿಕರ ಸಂಖ್ಯೆ ಆಧರಿಸಿ ಚಿತ್ರದುರ್ಗದಿಂದ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಗೆ ಪಾಯಿಂಟ್ ಟು ಪಾಯಿಂಟ್(ನಾನ್‌ಸ್ಟಾಪ್) ಸೇವೆ ಆರಂಭಗೊಂಡಿತು.

    ಒಂದು ಬಸ್ಸಿನಲ್ಲಿ ಶೇ.50 ಪ್ರಯಾಣಿಕರಿಗೆ ಅವಕಾಶವಿತ್ತು. ಮಾರ್ಗ ಮಧ್ಯೆ ನಿಲುಗಡೆಗೆ ಅವಕಾಶ ಇರಲಿಲ್ಲ. ಪ್ರಯಾಣದ ವೇಳೆ ಮಾಸ್ಕ್ ಕಡ್ಡಾಯವಾಗಿತ್ತು ಹಾಗೂ ಆರೋಗ್ಯದಲ್ಲಿ ವ್ಯತ್ಯಾಸವಿರುವಂಥವರ ಪ್ರಯಾಣಕ್ಕೆ ಅವಕಾಶ ನಿರಾಕರಿಸಲಾಗಿತ್ತು.

    ಪ್ರಯಾಣ ಆರಂಭಿಸುವ ಮುನ್ನ ನಿಗಮ ನಾನಾ ಸುರಕ್ಷಾ ಕ್ರಮಗಳನ್ನು ಕೈಗೊಂಡಿತ್ತು. ನಿಲ್ದಾಣದಲ್ಲಿ ಸಾಮಾಜಿಕ ಅಂತರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

    ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸ್ಕ್ರೀನಿಂಗ್ ಹಾಗೂ ಬ್ರೇಕಿಂಗ್ ಸ್ಯಾನಿಟೈಜರ್ ಯಂತ್ರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ ಸೋಮವಾರ ಚಾಲನೆ ನೀಡಿದರು.

    ಬಳಿಕ ಮಾತನಾಡಿ, ದುರ್ಗಕ್ಕೆ ಇರುವ ಹಸಿರು ವಲಯದ ಪಟ್ಟ ಉಳಿಸಲು ಜಿಲ್ಲಾಡಳಿತದೊಂದಿಗೆ ಜನರ ಸಹಕಾರ ಅತ್ಯಂತ ಮುಖ್ಯವಾಗಿ ಬೇಕಾಗಿದೆ ಎಂದರು.

    ದಾವಣಗೆರೆ, ಬಳ್ಳಾರಿ, ತುಮಕೂರು ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣ ಇರುವುದರಿಂದ ಅಂತರ ಜಿಲ್ಲೆಗಳಿಗೆ ಪ್ರಯಾಣ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದಪ್ಪ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಖಾಸಿಂ ಸಾಬ್, ಜಿಲ್ಲಾ ಮೇಲ್ವಿಚಾರಕ ಎಂ.ಬಿ.ಹನುಮಂತಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಾನಕಿ, ಮೂಗಪ್ಪ, ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳಾದ ಡಾ.ಸುಪ್ರಿತಾ, ಡಾ.ವಾಣಿ ಮತ್ತಿತರರು ಇದ್ದರು.

    ಪ್ರಯಾಣಿಕರ ಮಾಹಿತಿ ಸಂಗ್ರಹ: ಸಾರಿಗೆ ಬಸ್ ನಿರ್ವಾಹಕರು ಪ್ರಯಾಣಿಕರ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ವಿಜಯಕುಮಾರ್ ತಿಳಿಸಿದರು. ಪ್ರಯಾಣಿಕರ ಬೇಡಿಕೆ ಗಮನಿಸಿ ಬಸ್ಸುಗಳ ಸಂಚಾರ ಹಂತ ಹಂತವಾಗಿ ಆರಂಭವಾಗಲಿದೆ. ಮೊದಲ ದಿನ 30 ಬಸ್ಸುಗಳನ್ನು ಓಡಿಸಲು ಸಜ್ಜುಗೊಳಿಸಲಾಗಿದ್ದು, ಇತರೆ ಹಸಿರು ವಲಯದ ಜಿಲ್ಲೆಗಳಿಗೆ ಬಸ್ಸುಗಳನ್ನು ಓಡಿಸಲು ಅಲ್ಲಿನ ಜಿಲ್ಲಾಧಿಕಾರಿಗಳು ಸಮ್ಮತಿ ನೀಡಿಲ್ಲ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts