More

    104 ಜನರ ವರದಿ ನೆಗೆಟಿವ್

    ಚಿತ್ರದುರ್ಗ: ಗುರುವಾರ 104 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲ ವರದಿಗಳೂ ನೆಗೆಟಿವ್ ಬಂದಿದೆ. ಆದರೆ, ಹಿಂದಿನ ದಿನ ಬಾಕಿ ಉಳಿದಿದ್ದವರ ಪೈಕಿ ಇನ್ನೂ ಇಬ್ಬರ ವರದಿ ಬರ ಬೇಕಿದೆ ಎಂದು ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ತಿಳಿಸಿದ್ದಾರೆ.

    ಸದ್ಯ ಜಿಲ್ಲೆಯಲ್ಲಿ 2149 ಜನ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 47ಕ್ಕೆ ಏರಿದ್ದು, ಇವರ ಪೈಕಿ 43 ಜನರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 3 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಈವರೆಗೆ 4683 ಜನರ ಮಾದರಿ ಸಂಗ್ರಹಿಸಲಾಗಿದ್ದು, 4502 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 134 ಮಾದರಿಗಳನ್ನು ತಿರಸ್ಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಆರೋಗ್ಯ ಜಾಗೃತಿ ಕಾರ್ಯಕ್ರಮ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಂಗಳೂರು ಮಣಿಪಾಲ್ ಆಸ್ಪತ್ರೆ ಸಹಯೋಗದೊಂದಿಗೆ ನಗರದ ಪತ್ರಿಕಾಭವನದಲ್ಲಿ ಜೂ.26ರ ಬೆಳಗ್ಗೆ 11ಕ್ಕೆ ಆರೋಗ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಾ.ಸುನೀಲ್ ಕಾರಂತ ಕೋವಿಡ್-19ರ ಸೋಂಕಿನ ಕುರಿತು ಮಾಹಿತಿ ನೀಡಲಿದ್ದಾರೆ. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಣಿಪಾಲ್ ಆಸ್ಪತ್ರೆ ಹೆಲ್ತ್‌ಕಾರ್ಡ್ ವಿತರಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಎಚ್.ಲಕ್ಷ್ಮಣ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts