More

    ಅಂತರ್ಜಲ ಬತ್ತಿದರೆ ಜೀವ ಸಂಕುಲ ನಾಶ

    ಚಿತ್ರದುರ್ಗ: ಎಲ್ಲೆಂದರಲ್ಲಿ ಕೊಳವೆ ಬಾವಿ ಕೊರೆಸುವುದರಿಂದ ಅಂತರ್ಜಲ ಬರಿದಾಗಿ, ಜೀವ ಸಂಕುಲ ಹಾಗೂ ನೀರಿನ ಸೆಲೆ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ.ಎಂ.ಜಿ.ಚಂದ್ರಕಾಂತ್ ಆತಂಕ ವ್ಯಕ್ತಪಡಿಸಿದರು.

    ಚಿತ್ರದುರ್ಗ ಇತಿಹಾಸ ಕೂಟ ಇತಿಹಾಸ ಸಂಸ್ಕೃತಿ ಸಂಶೋಧನೆಗಳ ವಿಚಾರ ವೇದಿಕೆ ಹಾಗೂ ರೇಣುಕಾ ಪ್ರಕಾಶನ ಸಹ ಯೋಗದಲ್ಲಿ ನಗರದ ಐಎಂಎ ಹಾಲ್‌ನಲ್ಲಿ ಭಾನುವಾರ ಏರ್ಪಡಿಸಿದ್ದ ಅಂತರ್ಜಲ ನೀರಾವರಿಯ ಮೇಲೆ ಹವಾಮಾನ ಬದಲಾವಣೆ ಪರಿಣಾಮಗಳು ಕುರಿತು ಮಾತನಾಡಿದರು.

    ಮನಸೋ ಇಚ್ಛೆ ಕೊಳವೆ ಬಾವಿ ಕೊರೆಸುವುದನ್ನು ನಿಯಂತ್ರಿಸಲು 2011ರಲ್ಲಿ ಅಂರ್ತಜಲ ಕಾಯ್ದೆ ಜಾರಿಗೊಳಿಸಿದ್ದರೂ, ಅದರ ಅನುಷ್ಠಾನ ಪರಿಣಾಮಕಾರಿಯಾಗಿಲ್ಲ. ಕೆಲ ತಾಲೂಕುಗಳಲ್ಲಿ ಅಡಕೆ, ತೆಂಗಿನ ತೋಟಗಳಲ್ಲಿ ಕೊಳವೆ ಬಾವಿಗಳ ಸಂಖ್ಯೆ 50ನ್ನು ಮೀರಿವೆ ಎಂದು ಕಳವಳ ವ್ಯಕ್ತಪಡಿಸಿದರು.

    ಅಂತರ್ಜಲ ಮರು ಪೂರಣದಂಥ ಒಳ್ಳೆ ಕೆಲಸ ಚಿತ್ರದುರ್ಗ ಮಳೆ ನೀರು ಕೊಯ್ಲು ತಜ್ಞ ಎನ್.ಜೆ.ದೇವರಾಜರೆಡ್ಡಿ ಮಾಡುತ್ತಿರುವುದು ಶ್ಲಾಘನೀಯ ಎಂದರು.

    ಇತಿಹಾಸ ಕೂಟದ ಸಂಚಾಲಕ ಡಾ.ಎನ್.ಎಸ್.ಮಹಂತೇಶ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಸಂಶೋಧಕ ಪ್ರೊ.ಲಕ್ಷ್ಮಣ್ ತೆಲಗಾವಿ, ರೇಣುಕಾ ಪ್ರಕಾಶನದ ಎನ್.ಡಿ.ಶಿವಣ್ಣ, ಸಾಹಿತಿ ಬಿ.ಎಲ್.ವೇಣು, ಶ್ರೀಶೈಲಾರಾಧ್ಯ, ಡಾ.ರಾಮಚಂದ್ರನಾಯಕ, ವಕೀಲ ಎಂ.ಚಲ್ಮೇಶ್, ಮಲ್ಲಿಕಾರ್ಜುನ್, ನಾಗರಾಜ್, ಮೃತ್ಯುಂಜಯ, ಡಿ.ಗೋಪಾಲಸ್ವಾಮಿ ನಾಯಕ, ಗುರುನಾಥ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts