More

    ಕೆಳಗಿನ ಬಸ್‌ಸ್ಟಾೃಂಡ್ ಮರು ನಿರ್ಮಿಸಿ

    ಚಿತ್ರದುರ್ಗ: ಜಿಲ್ಲಾಸ್ಪತ್ರೆ ಮುಂಭಾಗ ಹಲವು ವರ್ಷಗಳಿಂದಿದ್ದ ಬಸ್ ನಿಲ್ದಾಣವನ್ನು ನಗರಸಭೆ ಮತ್ತು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಬಹುಜನ ಕ್ರಾಂತಿ ಮೋರ್ಚಾ ಒತ್ತಾಯಿಸಿದೆ.

    ಬುಧವಾರ ಎಡಿಸಿ ಸಿ.ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದ ಮೋರ್ಚಾದ ಪದಾಧಿಕಾರಿಗಳು, ಬಸ್ ನಿಲ್ದಾಣದ ಪುನರ್ ನಿರ್ಮಾಣ ಮಾಡಬೇಕು ಹಾಗೂ ತುರುವನೂರು ರಸ್ತೆಯಲ್ಲಿರುವ ನಗರಸಭೆ ಮಳಿಗೆಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

    ಮೋರ್ಚಾ ಮುಖಂಡ ಟಿ.ಶಫಿವುಲ್ಲಾ ಮಾತನಾಡಿ, ಜಿಲ್ಲಾಸ್ಪತ್ರೆ ಎದುರಿನ ತುರುವನೂರು-ಬಿಡಿ ರಸ್ತೆ ಸದಾ ಜನ, ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಇಲ್ಲಿ ಈ ಹಿಂದೆ ಇದ್ದ ಬಸ್ ನಿಲ್ದಾಣದ ಜಾಗದಲ್ಲಿ ನಗರಸಭೆ ಮಳಿಗೆ ನಿರ್ಮಿಸಿದೆ. ಉಳಿದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದೂರಿದರು.

    ಇದರಿಂದ ವಾಹನ ನಿಲುಗಡೆಗೆ ಸಮಸ್ಯೆಗೆ ಆಗಿದೆ. ಜತೆಗೆ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಣಾಮ ಹಿರಿಯೂರು, ಚಳ್ಳಕೆರೆ ಹಾಗೂ ಬೆಂಗಳೂರಿನ ಈ ಮಾರ್ಗದಲ್ಲಿ ಸದಾ ಟ್ರಾಫಿಕ್ ಜಾಮ್ ಆಗುತ್ತಿದ್ದು, ಪಾದಾಚಾರಿ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

    ಮೊದಲಿಂದಲೂ ಕೆಳಗಿನ ಬಸ್‌ಸ್ಟಾೃಂಡ್ ಎಂದೇ ಕರೆಯುವ ಸ್ಥಳದಲ್ಲಿ ನಿಲ್ದಾಣವಿಲ್ಲದೆ ವಾಹನಗಳು ಎಲ್ಲೆಂದರಲ್ಲಿ ನಿಲುಗಡೆ ಆಗುತ್ತಿರುವುದರಿಂದ ಅಪಘಾತಗಳಿಗೂ ಆಹ್ವಾನ ನೀಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಪ್ರಯಾಣಿಕರು, ರೋಗಿಗಳು ಕೂರಲು ಜಾಗವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ನಗರಸಭೆಗೆ ಅಲ್ಪ ಪ್ರಮಾಣದ ಆದಾಯವಿರುವ ಮಳಿಗೆ ಹಾಗೂ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸಿ ಸುಸಜ್ಜಿತ ಪ್ರಯಾಣಿಕರ ತಂಗುದಾಣ ನಿರ್ಮಿಸಬೇಕೆಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts