17.8 C
Bengaluru
Wednesday, January 22, 2020

ಅನ್ನದಾತರಲ್ಲಿ ಭರವಸೆ ಮೂಡಿಸಿದ ರೋಹಿಣಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಚಿತ್ರದುರ್ಗ: ಸತತ ಬರದಿಂದ ಕಂಗೆಟ್ಟಿದ್ದ ಕೋಟೆನಾಡಿನ ಮೇಲೆ ರೋಹಿಣಿ ಕೊನೆಗೂ ಕರುಣೆ ತೋರಿದ್ದಾಳೆ. ವಾರದಿಂದ ಕಣ್ಣಾಮುಚ್ಚಾಲೆ ಆಡಿದರು ಭಾನುವಾರ ರಾತ್ರಿ ಭರವಸೆ ತೋರಿದಳು.

ಮಳೆಯಿಲ್ಲದೆ ಬರಿದಾಗಿದ್ದ ಕೆರೆ, ಕುಂಟೆಗಳು, ಬಾವಿ, ಹೊಂಡ, ಕಲ್ಯಾಣಿಗಳಲ್ಲಿ ಜೀವ ಜಲ ನಳನಳಿಸುತ್ತಿದೆ. ಜತೆಗೆ ತಗ್ಗು ಪ್ರದೇಶಗಳಲ್ಲಿರುವ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಒಂದಿಷ್ಟು ಸಮಸ್ಯೆ ಆಗಿದೆ.

ತಡ ರಾತ್ರಿ 10.30ರ ವೇಳೆ ಶುರುವಾದ ಮಳೆ ಕ್ಷಣಮಾತ್ರದಲ್ಲೇ ವೇಗ ಹೆಚ್ಚಿಸಿಕೊಂಡು 1 ಗಂಟೆ ವರೆಗೆ ಬಿರುಸಿನಿಂದ ಸುರಿಯಿತು. ಕೊಂಚ ಬಿಡುವು ನೀಡಿ ಮುಂಜಾನೆ 3ಕ್ಕೆ ಪುನಃ ಶುರುವಾಗಿ 4.30ಕ್ಕೆ ನಿಂತಿತು. ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ, ಹಾಯ್ಕಲ್, ಬೆಳಗಟ್ಟ ಭಾಗದಲ್ಲೂ ಮಳೆಯಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಮಳೆ ಆರಂಭವಾಗುತ್ತಿದ್ದಂತೆ ಕ್ಷಣಾರ್ಧದಲ್ಲಿ ನಗರದ ರಸ್ತೆಗಳೆಲ್ಲ ಕಾಲುವೆಗಳಾಗಿ ಮಾರ್ಪಡಾದವು. ಈ ಊರಿನ ಸಂಪ್ರದಾಯದಂತೆ ಎಸ್‌ಬಿಎಂ ವೃತ್ತದಿಂದ ಎಂ.ಜಿ.ವೃತ್ತದವರೆಗೆ ರಸ್ತೆಯೆಲ್ಲ ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಕೆಳಗೋಟೆಯ ಕೆಎಸ್‌ಆರ್‌ಟಿಸಿ ಬಸ್ ಡಿಪೊ ರಸ್ತೆ ಮತ್ತು ಚರಂಡಿಗಳೆಲ್ಲ ಭರ್ತಿಯಾಗಿ, ರಸ್ತೆ ಯಾವುದಯ್ಯ ಎಂಬ ಸ್ಥಿತಿ ನಿರ್ಮಾಣವಾಗಿತ್ತು.

ಮಾಸ್ತಮ್ಮ ಬಡಾವಣೆ, ಕೆಎಸ್‌ಆರ್‌ಟಿಸಿ ಲೇಔಟ್, ವಿ.ಪಿ.ಬಡಾವಣೆ, ನೆಹರು ನಗರ, ಜೆಸಿಆರ್, ಎಸ್‌ಐಸಿ ಕಚೇರಿ ಸೇರಿ ಕೆಲ ಭಾಗಗಳಲ್ಲಿ ಚರಂಡಿಗಳು ತುಂಬಿ ಹರಿದವು. ತೋಟಗಾರಿಕೆ ಇಲಾಖೆ ಕಚೇರಿ ರಸ್ತೆಯಲ್ಲಿ ಆಟೋದ ಮೇಲೆ ಮರದ ಕೊಂಬೆ ಬಿದ್ದಿತು. ಆದರೆ, ಯಾವುದೇ ಪ್ರಾಣಾಪಾಯವಾಗಿಲ್ಲ.

ಮುಖ್ಯ ರಸ್ತೆಯ ಚರಂಡಿಗಳಲ್ಲಿ ತುಂಬಿದ್ದ ಪ್ಲಾಸ್ಟಿಕ್ ಮಿಶ್ರಿತ ಹೂಳನ್ನು ಪೌರ ಕಾರ್ಮಿಕರು ಮುಂಜಾನೆಯಿಂದಲೇ ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಿದರು. ರಸ್ತೆ ಮೇಲೆ ಹರಡಿದ್ದ ಮಣ್ಣನ್ನು ತುಂಬಿ ಸ್ವಚ್ಛಗೊಳಿಸಿದರು. ಮುಖ್ಯ ರಸ್ತೆಯ ಅಂಗಡಿ ಮಾಲೀಕರು ಚರಂಡಿಗೆ ಪ್ಲಾಸ್ಟಿಕ್ ಹಾಕುತ್ತಿರುವುದರಿಂದ ಈ ಸಮಸ್ಯೆಯಾಗಿದೆ ಎಂದು ಪೌರ ಕಾರ್ಮಿಕರು ತಿಳಿಸಿದರು.

ಈಶ್ವರಗೆರೆಯಲ್ಲಿ 62.8 ಮಿಮೀ: ಹಿರಿಯೂರು ತಾಲೂಕು ಈಶ್ವರಗೆರೆಯಲ್ಲಿ ಅಧಿಕ 62.8 ಮಿ.ಮೀ., ಹೊಳಲ್ಕೆರೆ ತಾಲೂಕು ಚಿಕ್ಕಜಾಜೂರಲ್ಲಿ 1.6 ಮಿ.ಮೀ. ಅತ್ಯಂತ ಕಡಿಮೆ ಮಳೆಯಾಗಿದೆ. ಉಳಿದಂತೆ ಚಳ್ಳಕೆರೆ 22.2, ಪರಶುರಾಂಪುರ 12, ನಾಯಕನಹಟ್ಟಿ 34.2, ಡಿ.ಮರಿಕುಂಟೆ 31.4, ತಳಕು 14.4, ಚಿತ್ರದುರ್ಗ 1 ರಲ್ಲಿ 37.2, ಚಿತ್ರದುರ್ಗ 2 ರಲ್ಲಿ 40.8. ಹಿರೇಗುಂಟನೂರು 4, ಐನಹಳ್ಳಿ 31.6, ಭರಮಸಾಗರ 23.2, ಸಿರಿಗೆರೆ 14.6, ತುರುವನೂರು 19.8, ಹಿರಿಯೂರು 46.6, ಬಬ್ಬೂರು 38.6, ಇಕ್ಕನೂರು 50.8, ಸೂಗೂರು 21.3, ಜೆ.ಜಿ.ಹಳ್ಳಿ 15, ಹೊಳಲ್ಕೆರೆ 19.2, ರಾಮಗಿರಿ 11, ಚಿಕ್ಕಜಾಜೂರು 1.6, ಬಿ.ದುರ್ಗ 8.2, ಎಚ್.ಡಿ.ಪುರ 23, ತಾಳ್ಯ 9.5, ಹೊಸದುರ್ಗ 24.8, ಬಾಗೂರು 15.2, ಮತ್ತೋಡು 58, ಶ್ರೀರಾಂಪುರ 60.2, ಮಾಡದಕೆರೆ 17, ಮೊಳಕಾಲ್ಮೂರು 26, ಬಿ.ಜಿ.ಕೆರೆ 10, ರಾಂಪುರ 24, ದೇವಸಮುದ್ರ 20.2, ರಾಯಪುರ 20.6 ಮಿ.ಮೀ ಮಳೆಯಾಗಿದೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...