ಮೀಸಲು ಹೋರಾಟ ಪಾದಯಾತ್ರೆ

ಚಿತ್ರದುರ್ಗ: ಮೀಸಲು ಪ್ರಮಾಣ ಹೆಚ್ಚಳ ಸಹಿತ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜನಹಳ್ಳಿಯಿಂದ ರಾಜಧಾನಿಗೆ ಪಾದಯಾತ್ರೆ ಹೊರಟಿರುವ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ನೇತೃತ್ವದ ತಂಡ ಬುಧವಾರ ಸಂಜೆ ಮುರುಘಾ ಮಠ ತಲುಪಿತು.

ಇದಕ್ಕೂ ಮುನ್ನ ಮಾರ್ಗ ಮಧ್ಯೆ ಮಾಜಿ ಸಚಿವ ಎಚ್.ಆಂಜನೇಯ ಸ್ವಾಮೀಜಿ ಅವರನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಎಸ್ಸಿ, ಎಸ್ಟಿ ಸೇರಿ ಶೋಷಿತ ಸಮುದಾಯಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವ ನಿಟ್ಟಿನಲ್ಲಿ ನಡೆವ ಎಲ್ಲ ಹೋರಾಟಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು. ಜಿಪಂ ಸದಸ್ಯ ನರಸಿಂಹರಾಜು, ಸಮುದಾಯದ ಪ್ರಮುಖರು ಇದ್ದರು.

Leave a Reply

Your email address will not be published. Required fields are marked *