ಲಾರಿ, ಇನ್ನೋವಾ ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಮೂವರು ಮಹಿಳೆ ಸೇರಿ ನಾಲ್ವರ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದ ಬಳಿ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೃತರ ಗುರುತು ಪತ್ತೆಯಾಗಬೇಕಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *