More

    ಅಕ್ರಮ ಧಾರ್ಮಿಕ ಕಟ್ಟಡ ತೆರವಿಗೊಳಿಸಿ

    ಚಿತ್ರದುರ್ಗ: ರಸ್ತೆ, ಉದ್ಯಾನ, ಕೆರೆ ಮತ್ತಿತರ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ತಕ್ಷಣ ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.

    ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ತೆರವು, ರಸ್ತೆ ಹಾಗೂ ಕೆರೆ ಒತ್ತುವರಿ ತೆರವು ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

    ಅನಧಿಕೃತ ಕಟ್ಟಡಗಳ ಸರ್ವೆ ಬಳಿಕ ಕಟ್ಟುನಿಟ್ಟಿನಿಂದ ತೆರವು ಕಾರ್ಯಾಚರಣೆ ನಡೆಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆಯಾ ಗುತ್ತಾರೆ. ಈ ಕುರಿತಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ಕಾರ್ಯ ನಡೆಯಬೇಕು. ಸರ್ವೋಚ್ಚ ನ್ಯಾಯಾಲಯದ ಆದೇಶ ಪಾಲಿಸಲೇ ಬೇಕು ಎಂದು ಸೂಚಿಸಿದರು.

    ತಹಸೀಲ್ದಾರ್, ತಾಪಂ ಇಒ, ಗ್ರಾಮ ಲೆಕ್ಕಿಗರು, ಪಿಡಿಒ, ಬಿಲ್‌ಕಲೆಕ್ಟರ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿರುವ ತಂಡ ಸರ್ವೇ ನಡೆಸಿ, ಪೊಲೀಸ್ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಬೇಕು.

    ಈ ವೇಳೆ ಅಡ್ಡಿ ಉಂಟು ಮಾಡಿದರೆ ಕೋರ್ಟ್ ಮೊರೆ ಹೋಗುವಂತೆ ಅವರಿಗೆ ಸೂಚಿಸಬೇಕು. ಸರ್ವೆ ವರದಿಯನ್ನು ಫೆ.28ರೊಳಗೆ ತಮಗೆ ಸಲ್ಲಿಸಬೇಕು. ಅನಧಿಕೃತ ಧಾರ್ಮಿಕ ಕಟ್ಟಡಗಳ ಮಾಹಿತಿ ನೀಡುವಂಥವರ ಹೆಸರನ್ನು ಗೌಪ್ಯವಾಗಿ ಇಡಬೇಕು ಎಂದರು.
    ಎಡಿಸಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ವಿ.ಪ್ರಸನ್ನ ಮತ್ತಿತರ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts