ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಚಿತ್ರದುರ್ಗ: ನಗರದ ಅಯ್ಯಪ್ಪಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಾನುವಾರ ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಬಳಿಕ ಶೇ.85ಕ್ಕೂ ಹೆಚ್ಚು ಅಂಕ ಗಳಿಸಿದ ಬಡಾವಣೆಯ 20 ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಸಂಘದ ಗೌರವಾಧ್ಯಕ್ಷ ಜೆ.ಪರಶುರಾಮ, ಅಧ್ಯಕ್ಷ ಎಚ್.ವಿ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಎಚ್.ಕೆ.ಪ್ರಾಣೇಶ್, ಕಾರ್ಯದರ್ಶಿ ಜಿ.ಆರ್.ಪ್ರತಾಪ್‌ರೆಡ್ಡಿ, ಸಹ ಕಾರ್ಯದರ್ಶಿ ಬಿ.ಬಡಮಲ್ಲಪ್ಪ, ಖಜಾಂಚಿ ಎಸ್.ವೆಂಕಟೇಶ್ ಹಾಗೂ ಸಂಘದ ನಿರ್ದೇಶಕರು, ಬಡಾವಣೆ ನಿವಾಸಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *