More

    ಚೊಚ್ಚಲ ಕೃತಿಗಳಿಗೆ ಪ್ರೋತ್ಸಾಹ

    ಚಿತ್ರದುರ್ಗ: ಎಸ್ಸಿ, ಎಸ್ಟಿ ಯುವ ಬರಹಗಾರರು ಕನ್ನಡದಲ್ಲಿ ರಚಿಸಿರುವ ಚೊಚ್ಚಲ ಕೃತಿಗಳಿಗೆ ಪ್ರೋತ್ಸಾಹ ಧನ ನೀಡಲು ಕನ್ನಡ ಪುಸ್ತಕ ಪ್ರಾಧಿಕಾರದಿಂದ ಅರ್ಜಿ ಆಹ್ವಾನಿಸಲಾಗಿದೆ.

    25 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಆಯ್ಕೆಗಾಗಿ ಸಲ್ಲಿಸುವ ಹಸ್ತ ಪ್ರತಿಯು ಕನ್ನಡ ಸಾಹಿತ್ಯ ಪ್ರಕಾರಗಳಲ್ಲಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶೆ, ಲೇಖನ, ಲಲಿತ ಪ್ರಬಂಧ, ಮಕ್ಕಳ ಸಾಹಿತ್ಯ ಮತ್ತು ಪ್ರಬಂಧ, ಸಾಹಿತ್ಯ ಮಾನವಿಕ, ವಿಜ್ಞಾನ, ವಿಚಾರ ಹಾಗೂ ಇತರೆ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿರಬೇಕು.

    ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-2. ಇಲ್ಲಿಗೆ ಜ.25ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 080-22484516ಕ್ಕೆ ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್‌ಸಿಂಗ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts