More

    ಸುಳ್ಳು ವಂದತಿ ನಂಬದಿರಿ

    ಚಿತ್ರದುರ್ಗ: ಮಾ.4ರಿಂದ 23ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಸುಳ್ಳು ವದಂತಿಗಳನ್ನು ನಂಬಬಾರದೆಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಹರಡಬಹುದಾದ ವದಂತಿ, ಸುಳ್ಳು ಮಾಹಿತಿಗಳಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಈಡಾಗಬಾರದು. ಚೆನ್ನಾಗಿ ಓದಿ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದ್ದಾರೆ.

    ಪರೀಕ್ಷಾ ವೇಳಾಪಟ್ಟಿ: 4ರಂದು ಇತಿಹಾಸ, ಭೌತಶಾಸ್ತ್ರ, ಮೂಲ ಗಣಿತ. 5-ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್. 6-ಕರ್ನಾ ಟಕ ಸಂಗೀತ, ಹಿಂದೂಸ್ತಾನಿ ಸಂಗೀತ. 7-ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಾಸಾಯನಶಾಸ್ತ್ರ. 9-ಎನ್‌ಎಸ್‌ಕ್ಯೂಎಫ್. 10-ಉರ್ದು. 11-ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ. 12-ಭೂಗೋಳಶಾಸ್ತ್ರ. 13-ಶಿಕ್ಷಣ. 14-ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ. 16-ಭೂಗರ್ಭಶಾಸ್ತ್ರ, ಗೃಹವಿಜ್ಞಾನ. 17-ಅರ್ಥಶಾಸ್ತ್ರ, ಜೀವಶಾಸ್ತ್ರ. 18-ಹಿಂದಿ. 19-ಕನ್ನಡ. 20-ಸಂಸ್ಕೃತ. 21-ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ , 23ರಂದು ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts