More

    ಲಾಕ್‌ಡೌನ್ ಪ್ರಕರಣದಲ್ಲಿ ತಾರತಮ್ಯ

    ಚಿತ್ರದುರ್ಗ: ಲಾಕ್‌ಡೌನ್ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಜಿಲ್ಲಾಡಳಿತ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

    ಪುತ್ರನ ಮದುವೆಗೆ ಸಂಬಂಧಿಸಿದಂತೆ ಲಾಕ್‌ಡೌನ್ ನಿಯಮ ಉಲ್ಲಂಘನೆಯ ಆರೋಪ ಹೊರೆಸಿ, ಹೊಸದುರ್ಗದ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ವಿರುದ್ಧ ಪ್ರಕರಣ ದಾಖಲಿಸಿರುವ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭಾಗವಹಿಸಿದ್ದ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ನಿಯಮಗಳನ್ನು ಗಾಳಿಗೆ ತೂರಿದ್ದರೂ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂದು ಆರೋಪಿಸಿದರು.

    ಕಾನೂನು ಎಲ್ಲರಿಗೂ ಒಂದೇ, ಜಿಲ್ಲಾಡಳಿತ ತಾರತಮ್ಯ ನೀತಿ ಖಂಡನೀಯ. ಕೂಡಲೇ ಇಂತಹ ಅಸಮಾನತೆ ನಿಲುವು ಕೈಬಿಡಬೇಕು. ಕಾನೂನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಆಗ್ರಹಿಸಿದರು. ಬಳಿಕ ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅವರಿಗೆ ಮನವಿ ಸಲ್ಲಿಸಿದರು.

    ಮಾಜಿ ಸಚಿವರಾದ ಎಚ್.ಆಂಜನೇಯ, ಡಿ.ಸುಧಾಕರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಟಿ.ರಘುಮೂರ್ತಿ, ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು, ಸದಸ್ಯರಾದ ನಾಗೇಂದ್ರನಾಯಕ್, ಕೆ.ಅನಂತ್, ಡಿ.ಕೆ.ಶಿವಮೂರ್ತಿ, ಮುಂಡ್ರಿಗಿ ನಾಗರಾಜ್, ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಮುಖಂಡರಾದ ಜಿ.ಎಸ್.ಮಂಜುನಾಥ್, ಬಿ.ಟಿ.ಜಗದೀಶ್, ಪಾಲವ್ವನಹಳ್ಳಿ ಕರಿಯಪ್ಪ, ಅಶೋಕ್ ನಾಯ್ಡು, ಖುದ್ದೂಸ್, ಎನ್.ಡಿ.ಕುಮಾರ್, ಸಂಪತ್‌ಕುಮಾರ್, ಅಂಜಿನಪ್ಪ, ಮೈಲಾರಪ್ಪ ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts