ಕೊಳೆಗೇರಿ ಪ್ರದೇಶವೆಂದು ಘೋಷಿಸಿ

ಚಿತ್ರದುರ್ಗ: ಸ್ಟೇಡಿಯಂ ರಸ್ತೆ ಬಲಭಾಗದಲ್ಲಿರುವ ನಾಗರಕಟ್ಟೆ ಪ್ರದೇಶವನ್ನು ಕೊಳೆಗೇರಿವೆಂದು ಘೋಷಿಸುವಂತೆ ಆಗ್ರಹಿಸಿ ಸ್ಲಂ ಜನಾಂದೋಲನದ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಎಸ್ಸಿ, ಎಸ್ಟಿ, ಹಿಂದುಳಿದ ಹಾಗೂ ಮೇಲ್ವರ್ಗದ ಬಡವರು ಈ ಪ್ರದೇಶದಲ್ಲಿ ಐವತ್ತು ವರ್ಷಗಳಿಂದ ವಾಸಿಸುತ್ತಿದ್ದು, ಇದುವರೆವಿಗೂ ಯಾವುದೇ ಮೂಲ ಸೌಲಭ್ಯ ಒದಗಿಸಿರುವುದಿಲ್ಲ. ಹಾಗಾಗಿ ಈ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಹಿನ್ನೆಲೆಯಲ್ಲಿ ಕರ್ನಾಟಕ ಕೊಳೆಚೆ ನಿರ್ಮೂಲನಾ ಮಂಡಳಿ ಅಧಿನಿಯಮ 1973ರ ಕಲಂ ಪ್ರಕಾರ ಪ್ರಾಥಮಿಕ ಅಧಿಸೂಚನೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಒಂದು ವೇಳೆ ಬೇಡಿಕೆ ಈಡೇರಿಸಲು ನಿರ್ಲಕ್ಷೃ ವಹಿಸಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿ ಎಡಿಸಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸಂಚಾಲಕ ಟಿ.ಮಂಜಣ್ಣ, ಜಿಲ್ಲಾಧ್ಯಕ್ಷ ಎಂ.ಮಹೇಶ್ ಮಿಲ್ಟ್ರಿ, ಉಪಾಧ್ಯಕ್ಷೆ ಮಾಲತಿ, ಕಾರ್ಯದರ್ಶಿ ಮಲ್ಲಿಕಾರ್ಜುನ್, ಭಾಗ್ಯಮ್ಮ, ಜಯಂತಿ, ಖಜಾಂಚಿ ಮಂಜುನಾಥ್ ಸೇರಿ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *