More

    ಚಿತ್ರದುರ್ಗ ಎಸ್‌ಆರ್‌ಎಸ್ ಶಾಲೆಯಲ್ಲಿ ಸಹಪಠ್ಯೇತರ ಚಟುವಟಿಕೆ

    ಚಿತ್ರದುರ್ಗ: ಪಠ್ಯೇತರ ಚಟುವಟಿಕೆ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಸೂಕ್ತ ವೇದಿಕೆಯಾಗಿದೆ ಎಂದು ಪ್ರಾಚಾರ್ಯ ಎಂ.ಎಸ್.ಪ್ರಭಾಕರ್ ಹೇಳಿದರು.

    ನಗರದ ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮೊದಲ ಹಂತದ ಸಹಪಠ್ಯೇತರ ಚಟುವಟಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ವರ್ಷವಿಡೀ ತರಗತಿ, ಬೋಧನೆಯಲ್ಲಿ ತೊಡಗುವ ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಕಸೃತಿಕ ಕಾರ್ಯಕ್ರಮಗಳು ಮನಸ್ಸಿಗೆ ಉಲ್ಲಾಸ ನೀಡುತ್ತವೆ ಎಂದು ಹೇಳಿದರು.

    ಸಹ ಪಠ್ಯೇತರ ಚಟುವಟಿಕೆಗಳು ಮಕ್ಕಳ ಪ್ರತಿಭೆ ಪ್ರದರ್ಶನ ಮಾತ್ರವಲ್ಲದೆ ಅವರ ವ್ಯಕ್ತಿತ್ವ ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಮೊದಲ ಹಂತದ ಪಠ್ಯೇತರ ಚಟುವಟಿಕೆಗಳಲ್ಲಿ ಸ್ಪರ್ಧಿಸಿದ ಎಲ್ಲ ವಿದ್ಯಾರ್ಥಿಗಳ ಸೃಜನಾತ್ಮಕ ಕಲೆಯನ್ನು ಶ್ಲಾಘನೀಯ ಎಂದರು.

    ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ್ಯಾಮಿಲಿ ಶೋ, ಏಕ ಪಾತ್ರಾಭಿನಯ, ಅಗ್ನಿ ರಹಿತ ಅಡುಗೆ, ತರಕಾರಿಗಳ ಅಚ್ಚುಗಳನ್ನು ಬಳಸಿ ಚಿತ್ರ ಬಿಡಿಸುವುದು, ಹೀಗೆ ವಿದ್ಯಾರ್ಥಿಗಳು ವಿವಿಧ ರಿತಿಯ ಚಟುವಟಿಕೆಗಳನ್ನು ಪ್ರದರ್ಶಿಸಿದರು. ಬೋಧಕ ಮತ್ತು ಬೋಧಕೇತರ ವರ್ಗದವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts