More

  ಶಿಕ್ಷಣದಿಂದ ಉತ್ತಮ ಭವಿಷ್ಯ

  ಚಿತ್ರದುರ್ಗ: ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ವಿದ್ಯಾಭ್ಯಾಸದೆಡೆ ಹೆಚ್ಚಿನ ನಿಗಾ ವಹಿಸಬೇಕೆಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

  ಪದವಿ ಪೂರ್ವ ಶಿಕ್ಷಣ ಇಲಾಖೆ ನಗರದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ್ ಸಮಾರೋಪ ಉದ್ಘಾಟಿಸಿ ಮಾತನಾಡಿದರು.

  ಉತ್ತಮ ಅಧ್ಯಯನ, ಒಳ್ಳೆಯ ಭವಿಷ್ಯ ನಿಮ್ಮ ಗುರಿಯಾಗಿರಲಿ. ಸಕಾರಾತ್ಮಕ ಆಲೋಚನೆ, ಮೌಲ್ಯಗಳೊಂದಿಗೆ ಬದುಕು ರೂಢಿಸಿಕೊಳ್ಳಿ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಾಹಿತಿ ತಿಳಿಯಿರಿ ಎಂದರು.

  ಸರ್ಕಾರಿ ಕಲಾ ಕಾಲೇಜು ಪ್ರಾಧ್ಯಾಪಕ ಗಂಗಾಧರ್ ಮಾತನಾಡಿ, ಎನ್ ಎಸ್‌ಎಸ್, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್‌ಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳು ಉತ್ತಮ ತಾಂತ್ರಿಕ ಕೌಶಲ್ಯ ಹಾಗೂ ನಾಯ ಕತ್ವ ಗುಣ ಹೆಚ್ಚಿಸಿಕೊಳ್ಳಬಹುದು ಎಂದು ತಿಳಿಸಿದರು.

  ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳಬಹುದು. ಚಿತ್ರನಟರ ಬಗ್ಗೆ ಹೊಂದಿರುವ ಅಭಿಮಾನ ದೊಡ್ಡದಲ್ಲ, ತಂದೆ, ತಾಯಿ, ಪೋಷಕರು ಹಾಗೂ ಗುರುಗಳೆಡೆ ಗೌರವ ಬೆಳೆಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

  ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಆರ್.ನಾಗರಾಜಪ್ಪ, ತಾಪಂ ಮಾಜಿ ಉಪಾಧ್ಯಕ್ಷೆ ಕೊಲ್ಲಿ ಲಕ್ಷ್ಮೀ, ನಗರಸಭಾ ಮಾಜಿ ಸದಸ್ಯ ಪ್ರಸನ್ನ ಕುಮಾರ್, ಪ್ರಕಾಶ್, ಸಮಾಜ ಸೇವಕ ಸೈಯದ್ ಅಖಿಲ್ ಷಾ ಹುಸೇನ್ ಮತ್ತಿತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts