More

    ಬಸವೇಶ್ವರ ಆಸ್ಪತ್ರೇಲಿ ಕ್ಯಾತ್‌ಲ್ಯಾಬ್ ಸೌಲಭ್ಯ

    ಚಿತ್ರದುರ್ಗ: ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಸಹಯೋಗದಲ್ಲಿ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ಕ್ಯಾತ್‌ಲ್ಯಾಬ್ ಸೌಲಭ್ಯವಿರುವ ಇಂಡಿಯಾ ನಾ ಎಸ್‌ಜೆಎಂ ಹಾರ್ಟ್ ಸೆಂಟರ್ ಜ.31ರಂದು ಉದ್ಘಾಟನೆಯಾಗಲಿದೆ ಎಂದು ಶ್ರೀ ಶಿವಮೂರ್ತಿ ಮುರುಘಾ ಶರಣರು ಹೇಳಿದರು.

    ಚಿತ್ರದುರ್ಗದಲ್ಲಿ ಮೊದಲ ಬಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಹೃದಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಿನದ 24 ಗಂಟೆ ತಜ್ಞ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಚಿತ್ರದುರ್ಗದಲ್ಲಿ ಮುಂದಿನ ದಿನಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನಮ್ಮ ಕನಸಾಗಿದೆ ಎಂದ ಅವರು, ವಿಶೇಷ ವೈದ್ಯಕೀಯ ಸೇವೆಗಳಿಗೆ ಹೊರ ಜಿಲ್ಲೆಗಳನ್ನು ಮಧ್ಯ ಕರ್ನಾಟಕದ ಜನ ಅವಲಂಬಿಸಿದ್ದಾರೆ. ಇದರಿಂದ ಹಣ, ಸಮಯ ವ್ಯರ್ಥವಾಗುತ್ತಿದೆ ಎಂದರು.

    ಇತರೆ ಜಿಲ್ಲೆಗಳ ಜನರು ಚಿತ್ರದುರ್ಗವನ್ನು ಅವಲಂಬಿಸುವಂತೆ ವೈದ್ಯಕೀಯ ಸೇವೆ ಉತ್ತಮ ಪಡಿಸಬೇಕಾಗಿದೆ ಎಂದು ತಿಳಿಸಿದರು.

    ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿ ಕಾರ್ಯನಿರ್ವಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಸದಸ್ಯೆ ಗಾಯತ್ರಿ ಶಿವರಾಂ, ಬಸವೇಶ್ವರ ಆಸ್ಪತ್ರೆ ಡೀನ್ ಡಾ.ಜಿ.ಪ್ರಶಾಂತ್, ವೈದ್ಯಕೀಯ ಅಧೀಕ್ಷಕ ಡಾ.ಎಲ್.ಪಾಲಾಕ್ಷಯ್ಯ ಇದ್ದರು.

    ಪ್ರಮಥರ ಸಮ್ಮೇಳನಕ್ಕೆ ಲಕ್ಷ ಜನ: ಫೆ.15ರಂದು ಬೆಂಗಳೂರಲ್ಲಿ ಮುರುಘಾ ಮಠದಿಂದ ಆಯೋಜಿಸಿರುವ ಅಸಂಖ್ಯ ಪ್ರಮಥರ ಸಮ್ಮೇಳನಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದು, ವಿಶೇಷವಾಗಿ ನೂರಾರು ಸಂಖ್ಯೆಯಲ್ಲಿ ಧಾರ್ಮಿಕ ನೇತಾರರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇದರ ಸಿದ್ಧತೆ ಭರದಿಂದ ನಡೆದಿದೆ ಎಂದು ಶರಣರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts