ಸಚಿವ ಶ್ರೀರಾಮುಲು ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ..!

Swamiji
Published on

ಚಿತ್ರದುರ್ಗ: ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಎದುರೇ ಸ್ವಾಮೀಜಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ನಗರದ ಬಿಜೆಪಿ ಕಚೇರಿ ಬಳಿ ನಡೆದಿದೆ.

ಯೋಗವನ ಬೆಟ್ಟದ ಅಧ್ಯಕ್ಷ ಸ್ಥಾನ ವಿಚಾರದಲ್ಲಿ ಮೋಸ ಮಾಡಿದ್ದಾರೆ ಎಂದು ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ ಸಚಿವರ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಠದ ಅಧ್ಯಕ್ಷ ಸ್ಥಾನದ ವಿಚಾರವಾಗಿ ಶ್ರೀರಾಮುಲು ಅವರ ಬಳಿ ಮನವಿ ಸಲ್ಲಿಸಲು ಸ್ವಾಮೀಜಿ ಬಂದಿದ್ದರು.‌ ಕನಕಪುರದ ಯೋಗವನಬೆಟ್ಟದ ಸಿದ್ದಲಿಂಗ ಶ್ರೀಗಳ ಲಿಂಗೈಕ್ಯ ಬಳಿಕ ಬಸವಕುಮಾರ ಸ್ವಾಮೀಜಿ ‌ಪೀಠಾಧ್ಯಕ್ಷರಾಗಿ ಆಯ್ಕೆಯಾದರು. ಕನಕಪುರ ಯೋಗವನ ಬೆಟ್ಟದ ಪೀಠಾಧ್ಯಕ್ಷರಾಗಿ ಸ್ಥಾನ ಕೈತಪ್ಪಿದ ಹಿನ್ನೆಲೆ ತಿಪ್ಪೇರುದ್ರಸ್ವಾಮಿ ವಿಷ ಸೇವಿಸಿದ್ದಾರೆ ಎನ್ನಲಾಗುತ್ತಿದೆ.

ಅಧಿಕಾರ ತೋಳ್ಬಲ ಹಣ ಇದ್ದೋರಿಗೆ ಮಾತ್ರ ಪೀಠಾಧ್ಯಕ್ಷರನ್ನಾಗಿ ಮಾಡಲಾಗುತ್ತದೆ ಎಂದು ಆರೋಪಿಸಿರುವ ತಿಪ್ಪೇರುದ್ರಸ್ವಾಮಿ, ಕಳೆದ ಹಲವು ದಿನಗಳಿಂದ ಯೋಗವನ ಬೆಟ್ಟದ ಮಠದ ಮುಂದೆ ಪ್ರತಿಭಟನೆ ಮಾಡುತ್ತಿದ್ದರು. ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ ಅವರನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net