More

    ನೇರ ರೈಲು ಮಾರ್ಗ, ಸಿಎಂ ಬಳಿಗೆ ನಿಯೋಗ

    ಚಿತ್ರದುರ್ಗ: ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಚುರುಕಿಗೆ ಆಗ್ರಹಿಸಿ ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲಾಗುವುದು ಎಂದು ರೈಲ್ವೆ ಹೋರಾಟ ಸಮಿತಿ ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ ತಿಳಿಸಿದರು.

    ಪ್ರವಾಸಿ ಮಂದಿರದಲ್ಲಿ ಬುಧವಾರ ಜರುಗಿದ ಸಭೆ ಬಳಿಕ ಮಾತನಾಡಿದ ಅವರು, ಸಭೆಯಲ್ಲಿ ನಿಯೋಗ ತೆರಳು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

    ಭೂ ಸ್ವಾಧೀನ ಪ್ರಕ್ರಿಯೆ ಕುರಿತಂತೆ ಚಿತ್ರದುರ್ಗ ಉಪ ವಿಭಾಗಾಧಿಕಾರಿ ಮಾಹಿತಿ ನೀಡಿದ್ದಾರೆ. ಭೂ ಸ್ವಾಧೀನ ಪ್ರಕ್ರಿಯೆ ಚುರುಕಿಗೆ ವಿಶೇಷ ಭೂ ಸ್ವಾಧೀನ ಅಧಿಕಾರಿ ನೇಮಿಸುವಂತೆ ಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲೇ ವಿಶೇಷ ಭೂ ಸ್ವಾಧೀನ ಅಧಿಕಾರಿ ನೇಮಿಸುವಂತೆ ಸಿಎಂಗೆ ಮನವಿ ಮಾಡುವುದಾಗಿ ಹೇಳಿದರು.

    ಸಮಿತಿ ಕಾರ್ಯಾಧ್ಯಕ್ಷ ಮುರುಘ ರಾಜೇಂದ್ರ ಒಡೆಯರ್, ಪ್ರಧಾನ ಕಾರ್ಯದರ್ಶಿ ರಮಾನಾಗರಾಜ್, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ, ಹಿರಿಯ ವಕೀಲ ಕೃಷ್ಣಪ್ಪ, ಕುರುಬರಹಳ್ಳಿ ಶಿವಣ್ಣ, ಸಿ.ಶಿವುಯಾದವ್, ಬಿ.ಪಿ.ಲಿಂಗಾರೆಡ್ಡಿ, ಹನುಮಂತಪ್ಪ, ಎಂ.ಬಿ.ಜಯದೇವಮೂರ್ತಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಮತ್ತಿತರ ಸಮಿತಿ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts