More

  ಮಾಳಪ್ಪನಹಟ್ಟಿ ಅಭಿವೃದ್ಧಿಗೆ ಆದ್ಯತೆ

  ಚಿತ್ರದುರ್ಗ: ಮಾಳಪ್ಪನಹಟ್ಟಿ ಗ್ರಾಮದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುತ್ತೇನೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಭರವಸೆ ನೀಡಿದರು.

  ತಾಲೂಕಿನ ಮಾಳಪ್ಪನಹಟ್ಟಿ ಗ್ರಾಮದಲ್ಲಿ ಬುಧವಾರ ಬಿಜೆಪಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾಳಪ್ಪನಹಟ್ಟಿಯ ಜನ ನನಗೆ ಮತ ಹಾಕಿಲ್ಲ. ಆದರೆ, ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುವುದಿಲ್ಲ. ನೀವೆಲ್ಲರೂ ನಮ್ಮವರೇ ಎಂದರು.

  ರಾಜಕೀಯ ಅನುಭವ ಇರುವ ಸಾಕಷ್ಟು ಜನರು ಬಿಜೆಪಿ ಸೇರಿರುವುದು ಪಕ್ಷದ ಬಲ ಹೆಚ್ಚಿಸಿದೆ. ಮುಂದಿನ ಚುನಾವಣೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

  ದೇಶ ಇದ್ದರೆ ನಾವೆಲ್ಲಾ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ದೇಶಕ್ಕಾಗಿ ರಾಜಕೀಯ ಬದಲಾವಣೆ ಮಾಡುವ ಅವಶ್ಯಕತೆ ಇದೆ. ಅದನ್ನೇ ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಮಾಳಪ್ಪನಹಟ್ಟಿ ಸೇರಿ ಯಾವ ಊರಿನಲ್ಲೂ ನಾನು ರಾಜಕೀಯ ದ್ವೇಷ ಮಾಡಿಲ್ಲ, ಮತ ಹಾಕಿದವರು, ಹಾಕದವರೂ ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣುತ್ತೇನೆ ಎಂದರು.

  ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ, ರತ್ನಮ್ಮ, ತಾಲೂಕು ಅಧ್ಯಕ್ಷ ಸುರೇಶ್ ಸಿದ್ದಾಪುರ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಪತ್‌ಕುಮಾರ್, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ನಗರಸಭೆ ಸದಸ್ಯ ಅಂಗಡಿ ಮಂಜಣ್ಣ, ಮುಖಂಡರಾದ ಎಚ್.ಮಂಜಪ್ಪ, ಪರಮೇಶ್, ಜಯಶಂಕರ್ ಇದ್ದರು.

  ನಾನೂ ಕೂಡ ಸಿದ್ದು ಅಭಿಮಾನಿ:
  ನಾನೂ ಕೂಡ ಸಿದ್ದರಾಮಯ್ಯ ಅವರ ಅಭಿಮಾನಿ. ಐದು ವರ್ಷ ಮುಖ್ಯಮಂತ್ರಿ ಹಾಗೂ ಈ ಹಿಂದೆ ಹಣಕಾಸು ಸೇರಿ ವಿವಿಧ ಖಾತೆ ನಿರ್ವಹಿಸಿದ ರೀತಿ ಮಾದರಿ. ಈಗ ಸಮರ್ಥ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಅವರಿಗೆ ಸ್ವಪಕ್ಷದಲ್ಲಿಯೇ ಕಾಲೆಳೆಯುವ ಕೆಲಸ ಮಾಡಲಾಗುತ್ತಿದೆ ಎಂದು ತಿಪ್ಪಾರೆಡ್ಡಿ ಹೇಳಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts