ಪಾಟೀಲ್ ರಾಜೀನಾಮೆ ಸ್ವಾಗತಾರ್ಹ

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 27ರಲ್ಲಿ ಆದ ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಚ್.ಕೆ.ಪಾಟೀಲ್ ರಾಜೀನಾಮೆ ಸಲ್ಲಿಸಿರುವುದನ್ನು ಚುನಾವಣಾ ಪ್ರಚಾರ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮಸಮುದ್ರದ ಜಿ.ಎಸ್.ಮಂಜುನಾಥ್ ಸ್ವಾಗತಿಸಿದ್ದಾರೆ.

ಎಐಸಿಸಿಸಿಗೆ ರಾಜೀನಾಮೆ ಸಲ್ಲಿಸಿರುವ ಎಚ್.ಕೆ.ಪಾಟೀಲ್ ನಡೆ ಪಕ್ಷದಲ್ಲಿ ಇತರರಿಗೆ ಮಾದರಿಯಾಗಬೇಕು. ಚುನಾವಣೆಗಳಲ್ಲಿ ಕಾಂಗ್ರೆಸ್ಸಿಗೆ ಸೋಲು, ಗೆಲುವು ಹೊಸದೇನೂ ಅಲ್ಲ. ಮುಂದಿನ ದಿನಗಳಲ್ಲಿ ನಾಯಕರು ಪಕ್ಷ ಸಂಘಟಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದ್ದು, ಆತಂಕ ಬೇಕಿಲ್ಲ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

Leave a Reply

Your email address will not be published. Required fields are marked *