More

    ವಿಶ್ವದಾಖಲೆ ಯೋಗಥಾನ್‌ಗೆ ಕೋಟೆನಾಡು ಸಜ್ಜು

    ಚಿತ್ರದುರ್ಗ: ಯೋಗಥಾನ್-2022ರ ಯಶಸ್ವಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಯೋಗಥಾನ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸ್ವಾತಂತ್ರೃ ಅಮೃತ ಮಹೋತ್ಸವ ಹಾಗೂ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂ.21ರಂದೇ ಯೋಗಥಾನ್‌ಗೆ ಚಾಲನೆ ನೀಡಲಾಗಿದೆ ಎಂದರು.

    ಯುವ ಜನರನ್ನು ಯೋಗದ ಕಡೆ ಸೆಳೆಯಬೇಕಿದೆ. ಯೋಗದ ಮಹತ್ವ, ಅದರಿಂದಾಗುವ ಪ್ರಯೋಜನಗಳ ಕುರಿತು ಜಾಗೃತಿ ಮೂಡಿಸಲು ನೆರವಾಗಲಿದ್ದು, ರಾಜ್ಯದ ಒಂದು ಕೋಟಿ ಜನರು ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಲು ಪ್ರೇರಣೆಯಾಗಲಿದೆ ಎಂದು ಹೇಳಿದರು.

    ಆ.6ರಿಂದ 27ರವರೆಗೆ ವಿಶ್ವ ದಾಖಲೆಯ ಈ ಕಾರ್ಯಕ್ರಮ ಜರುಗಲಿದೆ. ಪ್ರತಿ ದಿನ ಬೆಳಗ್ಗೆ 6.30ಕ್ಕೆ ಯೋಗ ತರಬೇತಿ ನೀಡಲಾಗುತ್ತದೆ. ಆಗಸ್ಟ್ 28ರಂದು ರಾಜ್ಯದಲ್ಲಿ ಏಕ ಕಾಲಕ್ಕೆ 5 ಲಕ್ಷ ಜನರು ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲಿದ್ದಾರೆ ಎಂದು ಹೇಳಿದರು.

    ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಸಾಮೂಹಿಕ ಯೋಗ ಪ್ರದರ್ಶನ ಏರ್ಪಡಿಸಬೇಕು. 13 ವರ್ಷ ವಯೋಮಿತಿ ಮೀರಿದ ಶಾಲಾ, ಕಾ ಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು. ಎಲ್ಲ ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲೂ ತಪ್ಪದೇ ಯೋಗ ತರಬೇತಿ ನೀಡಬೇಕು. ಪಿಯು ಹಾಗೂ ಪದವಿ ಕಾಲೇಜುಗಳ ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಘಟಕಗಳು, ಐಮಂಗಲದ ಪೊಲೀಸ್ ತರಬೇತಿ ಕೇಂದ್ರ ಪ್ರಶಿಕ್ಷಣಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಬೇಕು ಎಂದರು.

    300 ಯೋಗ ಶಿಕ್ಷಕರಿಗೆ ತರಬೇತಿ:

    ಶಿಷ್ಟಾಚಾರದಂತೆ ನಿಗದಿತ ಸಮಯದಲ್ಲಿ ಯೋಗಾಸನ ಪೂರ್ಣಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಆಸಕ್ತರಿಗೆ ತರಬೇತಿ ನೀಡಲು ಜಿಲ್ಲೆಯ ವಿವಿಧ ಯೋಗ ಸಂಘ-ಸಂಸ್ಥೆಗಳ 300 ಯೋಗ ಶಿಕ್ಷಕರಿಗೆ ತರಬೇತಿ ನೀಡಲಾಗುವುದು. ತರಬೇತಿ ಪಡೆದ ಪ್ರತಿ ಶಿಕ್ಷಕರು 50 ಜನರಿಗೆ ಯೋಗಾಸನ ತರಬೇತಿ ನೀಡುವರು. ಜಿಲ್ಲೆಯಲ್ಲಿ 15 ಸಾವಿರ ಜನರು ಯೋಗ ಪ್ರದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts