More

    ತಂಬಾಕು ಸೇವನೆ ಕ್ಯಾನ್ಸರ್‌ಗೆ ಹಾದಿ

    ಚಳ್ಳಕೆರೆ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಗುರುವಾರ ತಾಲೂಕಿನ ಬೆಳಗೆರೆ, ಹುಲಿಕುಂಟೆ, ಕಾಪರಹಳ್ಳಿಗೆ ಭೇಟಿ ನೀಡಿ 12 ಅಂಗಡಿ ಮಾಲೀಕರಿಗೆ ದಂಡ ವಿಧಿಸಿ, ಇನ್ಮುಂದೆ ತಂಬಾಕು ಉತ್ಪನ್ನ ಮಾರಿದರೆ ವ್ಯಾಪಾರ ಪರವಾನಗಿ ರದ್ದುಪಡಿಸುವುದಾಗಿ ಎಚ್ಚರಿಸಿ ನೋಟೀಸ್ ನೀಡಿದರು.

    ಈ ವೇಳೆ ಮಾತನಾಡಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಂಯೋಜಕ ಪ್ರಭುದೇವ್, ಗುಟ್ಕಾ, ಬೀಡಿ, ಸಿಗರೇಟ್ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ. ಇದು ಸಾಂಕ್ರಾಮಿಕ ಕಾಯಿಲೆಯಂತೆಯೇ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಹೀಗಾಗಿ ಎಚ್ಚರದಿಂದ ಇರಬೇಕು ಎಂದರು.

    ದೇಶವನ್ನು ಕ್ಯಾನ್ಸರ್ ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕು. ಅಂಗಡಿಗಳಲ್ಲಿ ಕಡ್ಡಾಯವಾಗಿ ತಂಬಾಕು ವಸ್ತುಗಳ ಮಾರಾಟ ನಿಲ್ಲಬೇಕು. ನಿಯಮ ಮೀರಿದ್ದಲ್ಲಿ ಕಾನೂನಿನ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

    ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಬಿ.ತಿಪ್ಪೇಸ್ವಾಮಿ ಮಾತನಾಡಿ, ಲಾಭದ ಆಸೆಗೆ ಮತ್ತೊಬ್ಬರ ಆರೋಗ್ಯ ಕೆಡಿಸುವ ಕೆಲಸವನ್ನು ಯಾರೂ ಮಾರಬಾರದು. ಆರೋಗ್ಯಕ್ಕೆ ಅಪಾಯಕಾರಿ ವಸ್ತುಗಳ ಮಾರಾಟ ನಿಷಿದ್ಧ. ಈ ಬಗ್ಗೆ ಪ್ರತಿ ಹಳ್ಳಿಗಳಲ್ಲೂ ಜಾಗೃತಿ ಮೂಡಿಸಬೇಕು. ಈ ದಂಡ ವಿಧಿಸಿದ್ದೇವೆ. ಇದೇ ಪ್ರವೃತ್ತಿ ಮುಂದುವರಿದರೆ ವ್ಯಾಪಾರ ಪರವಾನಗಿ ರದ್ದಾಗುತ್ತದೆ ಎಂದು ಹೇಳಿದರು.

    ಪೊಲೀಸ್ ಪೇದೆ ತಿಪ್ಪೇಸ್ವಾಮಿ, ಆರೋಗ್ಯ ಇಲಾಖೆಯ ಸುನೀತಾ, ಕೃಷ್ಣಮೂರ್ತಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts