ಕಾಂಗ್ರೆಸ್‌ ಸೋಲಿಗೆ ಕಾರಣ ಏನು ಎಂಬುದನ್ನು ಹೇಳಿದ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಪುತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನಕಾರಾತ್ಮಕವಾಗಿ ಪ್ರಚಾರ ಮಾಡಿದ್ದು ಕಾಂಗ್ರೆಸ್‌ಗೆ ವರದಾನವಾಗಿಲ್ಲ ಎಂದು ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಮಗ ಅನಿಲ್‌ ಶಾಸ್ತ್ರಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ನಡೆಸಿದ ವಿಪರೀತ ನಕಾರಾತ್ಮಕ ಪ್ರಚಾರವು ಜನರ ಮನಸ್ಸಿಗೆ ಇಳಿದಿಲ್ಲ. ಚೌಕಿದಾರ್‌ ಚೋರ್‌ ಹೈ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಪದೇ ಪದೆ ಹೇಳುತ್ತಿದ್ದದ್ದನ್ನು ಜನರು ಒಪ್ಪಿಕೊಂಡಿಲ್ಲ. ಸಾರ್ವಜನಿಕ ಸಮಸ್ಯೆಗಳನ್ನು ಗುರುತಿಸುವಲ್ಲಿ ಕಾಂಗ್ರೆಸ್‌ ಸೋತಿದೆ ಎಂದು ಜನರ ಮನದಾಳವನ್ನು ಅರಿಯಲು ವಿಫಲವಾದ ಕಾಂಗ್ರೆಸ್‌ ಮುಖ್ಯಮಂತ್ರಿಗಳ ಕುರಿತು ಹೇಳಿದರು.

ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳಲ್ಲಿನ ಉತ್ತಮ ಆಡಳಿತದಿಂದಾಗಿ ಅಂತಹ ರಾಜ್ಯಗಳಲ್ಲಿ ಉತ್ತಮ ಫಲಿತಾಂಶವನ್ನೇ ನೀಡಿದೆ ಎಂದು ಹೇಳಿದರು.

ಇನ್ನು ಗುರುವಾರವಷ್ಟೇ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದರು. (ಏಜೆನ್ಸೀಸ್)

One Reply to “ಕಾಂಗ್ರೆಸ್‌ ಸೋಲಿಗೆ ಕಾರಣ ಏನು ಎಂಬುದನ್ನು ಹೇಳಿದ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಪುತ್ರ”

  1. Congress-JDS alliance was made to take away the power. Karnataka people were given the mandate to BJP.

    Now they should respectfully come out and dissolve the assembly and seek re-mandate again.

Leave a Reply

Your email address will not be published. Required fields are marked *