Christopher Luxon : ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಭಾರತಕ್ಕೆ ಭೇಟಿ ನೀಡಿದ್ದು, ತಮ್ಮ ಬಿಡುವಿನ ಸಮಯದಲ್ಲಿ ದೆಹಲಿಯ ಬೀದಿಗಳನ್ನು ಸುತ್ತಿ, ಮಕ್ಕಳೊಂದಿಗೆ ಕ್ರಿಕೆಟ್ ಆಡಿ ಮೋಜು ಮಸ್ತಿ ಮಾಡಿದ್ದಾರೆ. ಈ ವೇಳೆ ಕಿವೀಸ್ ತಂಡದ ಮಾಜಿ ಕ್ರಿಕೆಟಿಗ ರಾಸ್ ಟೇಲರ್ ಕೂಡ ತಮ್ಮ ಪ್ರಧಾನಿಗೆ ಸಾಥ್ ನೀಡಿದರು. ಇದಕ್ಕೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಲುಕ್ಸನ್ ಅವರು ಮಂಗಳವಾರ (ಮಾರ್ಚ್ 18) ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ಹಲವಾರು ಗಣ್ಯರನ್ನು ಭೇಟಿಯಾದರು. ಈ ವೇಳೆ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ತುಂಬಾ ಬಿಜಿಯಾಗಿದ್ದ ಲುಕ್ಸನ್ ಅವರು ಸ್ವಲ ಬಿಡುವು ಮಾಡಿಕೊಂಡು, ಸಾಮಾನ್ಯ ವ್ಯಕ್ತಿಯಂತೆ ದೆಹಲಿ ಬೀದಿಗಳಲ್ಲಿ ಸಂಚರಿಸಿದರು. ಈ ವೇಳೆ ಮಕ್ಕಳೊಂದಿಗೆ ಕ್ರಿಕೆಟ್ ಆಡಿದರು. ಸ್ವಲ್ಪ ಹೊತ್ತು ಬ್ಯಾಟಿಂಗ್ ಮಾಡಿದ ನಂತರ ಬೌಲಿಂಗ್ ಕೂಡ ಮಾಡಿದರು.
ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ರಾಸ್ ಟೇಲರ್ ಕೂಡ ಆಟದಲ್ಲಿ ಭಾಗವಹಿಸಿದರು. ಲುಕ್ಸಾನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ಭಾರತ ಮತ್ತು ನ್ಯೂಜಿಲೆಂಡ್ ಅನ್ನು ಹತ್ತಿರ ತರುವಲ್ಲಿ ಕ್ರಿಕೆಟ್‌ಗಿಂತ ಉತ್ತಮವಾದದ್ದು ಯಾವುದೂ ಇಲ್ಲ ಎಂದು ಬರೆದುಕೊಂಡಿದ್ದಾರೆ.
Nothing unites New Zealand and India more than our shared love of cricket. pic.twitter.com/osnqmdgIu7
— Christopher Luxon (@chrisluxonmp) March 19, 2025
ಇತ್ತೀಚೆಗೆ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ ಗೆಲುವು ಸಾಧಿಸಿದ್ದು ಗೊತ್ತೇ ಇದೆ. ಈ ಪಂದ್ಯಾವಳಿಯ ನಂತರ ನ್ಯೂಜಿಲೆಂಡ್ ಪ್ರಧಾನಿ ಭಾರತಕ್ಕೆ ಭೇಟಿ ನೀಡಿರುವುದು ಗಮನಾರ್ಹವಾಗಿದೆ. (ಏಜೆನ್ಸೀಸ್)
ಕೆಟ್ಟ ಕೊಲೆಸ್ಟ್ರಾಲ್ ಅನ್ನು ನ್ಯಾಚುರಲ್ ಆಗಿ ಕಡಿಮೆ ಮಾಡಬೇಕಾ? ಕೇವಲ ಈ ಬದಲಾವಣೆ ಮಾಡಿ ಸಾಕು! Bad cholesterol
ಈ 3 ರಾಶಿಯಲ್ಲಿ ಜನಿಸಿದವರನ್ನು ಶಾಂತಿಯ ಪ್ರತಿರೂಪ ಎಂದು ಹೇಳಲಾಗುತ್ತೆ! ನೀವು ಯಾವ ರಾಶಿಯವರು? Zodiac Signs