ಸೆ.1ರಂದು ಸಾಮೂಹಿಕ ಚೂಡಿಪೂಜೆ

choodipooje
Published on

ಗಂಗೊಳ್ಳಿ: ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸ್ವಸಮಾಜದ ಸುಮಂಗಲಿಯರಿಂದ ಸಮಾಜದ ಶ್ರೇಯೋಭಿವೃದ್ಧಿಗಾಗಿ ಸಾಮೂಹಿಕ ಚೂಡಿಪೂಜೆ ಸೆ.1ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಚೂಡಿಪೂಜೆ ಬಳಿಕ ಭಜನಾ ಕಾರ್ಯಕ್ರಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಲಿದೆ ಎಂದು ದೇವಸ್ಥಾನ ಧರ್ಮದರ್ಶಿ ಮಂಡಳಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net