More

    ವಿಜೃಂಭಣೆಯ ಚುಂಚಶ್ರೀಗಳ ಮುತ್ತಿನ ಪಲ್ಲಕ್ಕಿ ಉತ್ಸವ

    ಹಿರೀಸಾವೆ: ಪುರಾಣ ಪ್ರಸಿದ್ಧ ಕ್ಷೇತ್ರ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ಸನ್ನಿಧಿಯಲ್ಲಿ 92ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಚುಂಚಶ್ರೀಗಳ ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ತೆಪ್ಪೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

    ಇದಕ್ಕೂ ಮುನ್ನ ಬಸವೇಶ್ವರಸ್ವಾಮಿಗೆ ಪಂಚಾಮೃತ ಅಭಿಷೇಕ ನೆರವೇರಿಸಿದ ಬಳಿಕ ದೀಪದಾರತಿ ಬೆಳಗಲಾಯಿತು. ರೈತರು ಜಾನುವಾರುಗಳನ್ನು ಸನ್ನಿಧಿಗೆ ಕರೆತಂದು ದೇಗುಲದ ಸುತ್ತ ಪ್ರದಕ್ಷಣೆ ಹಾಕಿಸಿ ತೀರ್ಥ ಪ್ರೋಕ್ಷಣೆ ಮಾಡಿಸಿದರು. ಹರಕೆ ಹೊತ್ತ ಭಕ್ತರು ಬಸವೇಶ್ವರಸ್ವಾಮಿಯ ಸರ್ಪೋತ್ಸವ ಪುಣ್ಯ ಕಾರ್ಯ ನೆರವೇರಿಸಿದರು.

    ವಿವಿಧ ಬಗೆಯ ಪುಷ್ಪ ಹಾಗೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ಮುತ್ತಿನ ಪಲ್ಲಕ್ಕಿಯ ಮೇಲೆ ನಿರ್ಮಲಾನಂದನಾಥ ಸ್ವಾಮೀಜಿ ಅಲಂಕೃತರಾಗುತಿದಂತೆಯೇ ಭಕ್ತರ ಜಯಘೋಷ ಮೊಳಗಿತು. ಮಂಗಳವಾದ್ಯದೊಂದಿಗೆ ಮುತ್ತಿನ ಪಲ್ಲಕ್ಕಿ ಉತ್ಸವ ಆರಂಭಗೊಂಡಿತು. ಉತ್ಸವ ದೇಗುಲವನ್ನು ಒಂದು ಸುತ್ತು ಪ್ರದಕ್ಷಣೆ ಹಾಕಿ ಪುಷ್ಕರಣಿ ಬಳಿ ಆಗಮಿಸಿತು. ಪುಷ್ಕರಣಿಯಲ್ಲಿ ವಿದ್ಯುತ್ ದೀಪಾಲಂಕಾರದೊಂದಿಗೆ ಸಿದ್ಧಗೊಂಡಿದ್ದ ತೆಪ್ಪದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿ, ಬಸವೇಶ್ವರಸ್ವಾಮಿ ಉತ್ಸವ ಮೂರ್ತಿ ಹಾಗೂ ಚೌಡೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಲಾಯಿತು.

    ನಿರ್ಮಲಾನಂದನಾಥ ಸ್ವಾಮೀಜಿ ಪುಷ್ವ ಸಿಂಹಾಸನದ ಮೇಲೆ ಅಲಂಕೃತರಾದ ತಕ್ಷಣ ತೆಪ್ಪೋತ್ಸವಕ್ಕೆ ಚಾಲನೆ ದೊರೆಯಿತು.
    ಆದಿಚುಂಚನಗಿರಿ ಹಾಸನ ಶಾಖಾಮಠದ ಶೀ ಶಂಭುನಾಥ ಸ್ವಾಮೀಜಿ, ಕಬ್ಬಳಿ ಮಠದ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಶಾಸಕ ಸಿ.ಎನ್.ಬಾಲಕೃಷ್ಣ, ದಿಡಗ ಗ್ರಾಪಂ ಮಾಜಿ ಅಧ್ಯಕ್ಷ ಎನ್.ಆರ್.ರತ್ನರಾಜ್, ಗುಡಿಗೌಡ ಪ್ರಕಾಶ್ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts