ಎರಡು ಸಾವಿರದ ಇಪ್ಪತ್ತು ಗೋಪಿಕೆಯರು..; ಡಿ.10ಕ್ಕೆ ಬಿಡುಗಡೆ

Gopikeyaru
Published on

ಬೆಂಗಳೂರು: ‘ಎರಡು ಸಾವಿರದ ಇಪ್ಪತ್ತು ಗೋಪಿಕೆಯರು’... ಈ ಶೀರ್ಷಿಕೆಯೇ ವಿಚಿತ್ರವಾಗಿದೆ. ಇತ್ತೀಚೆಗಷ್ಟೇ ಈ ಚಿತ್ರದ ಹಾಡನ್ನು ನೋಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮೆಚ್ಚಿಕೊಂಡಿದ್ದಾರೆ. ಇನ್ನೇನು ಡಿ. 10ಕ್ಕೆ ಸಿನಿಮಾ ಬಿಡುಗಡೆ ಆಗಲಿದ್ದು, ಆ ವಿಚಾರವನ್ನು ಹೇಳಿಕೊಳ್ಳಲು ತಂಡ ಮಾಧ್ಯಮದ ಮುಂದೆ ಬಂದಿತ್ತು.

‘ಈ ಕಾಲದ ಮಾಡರ್ನ್ ಹೆಣ್ಣು ಮಕ್ಕಳ ಕಥೆಯಿದು. ಹೆಣ್ಣಿನ ಮನಸ್ಸನ್ನು ತೋರಿಸುವ ಪ್ರಯತ್ನ ಈ ಚಿತ್ರದಲ್ಲಾಗಿದೆ. ಶೀರ್ಷಿಕೆಯ ವಿಶೇಷತೆಯನ್ನು ಸಿನಿಮಾದಲ್ಲಿಯೇ ನೋಡಿ’ ಎಂಬುದು ನಿರ್ದೇಶಕ ನಾರಾಯಣಸ್ವಾಮಿ ಅವರ ಮಾತು. ಕುಚ್ಚಣ್ಣ ಶ್ರೀನಿವಾಸ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಬಾಲಾಜಿ ಶರ್ಮಾ ಮತ್ತು ಪ್ರಿಯಾಂಕಾ ಚಿಂಚೋಳಿ ಮುಖ್ಯಭೂಮಿಕೆಯಲ್ಲಿದ್ದಾರೆ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ ಮಾಡಿದ್ದಾರೆ. ರಾಜಶೇಖರ್ ಈ ಚಿತ್ರದ ಕಾರ್ಯಕಾರಿ ನಿರ್ವಪಕ ರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net