'ನೈಂಟಿ' ಹೊಡೆದವರು ಮಾತು ಮುಗಿಸಿದರು ...

90 - Final
Published on

ಬೆಂಗಳೂರು: ವೈಜನಾಥ್​ ಬಿರಾದಾರ್​ ಅವರ 500ನೇ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ 'ನೈಂಟಿ ಹೊಡಿ ಮನೀಗ್ ನಡಿ' ಚಿತ್ರದ ಡಬ್ಬಿಂಗ್​ ಕೆಲಸಗಳು ಮುಗಿದಿದ್ದು, ಇತರೆ ಕೆಲಸಗಳು ಪ್ರಗತಿಯಲ್ಲಿದೆ.

ಇತ್ತೀಚೆಗಷ್ಟೆ, 'ನೈಂಟಿ ಹೊಡಿ ಮನೀಗ್ ನಡಿ' ಚಿತ್ರಕ್ಕಾಗಿ ಬೆಂಗಳೂರಿನ ಸುತ್ತಮುತ್ತ ಕೊನೆಯ ಹಂತದ ಚಿತ್ರೀಕರಣ ನಡೆಸಿ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆಯಲಾಗಿತ್ತು. ಇದೀಗ ಮುಂದುವರೆದ ಭಾಗವಾಗಿ ಮಾತಿನ ಮರುಜೋಡಣೆ ಕೆಲಸ ಯಶಸ್ವಿಯಾಗಿ ಮುಗಿದಿದೆ.

ಅಮ್ಮಾ ಟಾಕೀಸ್ ಬಾಗಲಕೋಟೆ ಬ್ಯಾನರಿನಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಉಮೇಶ್ ಬಾದರದಿನ್ನಿ ಮತ್ತು ನಾಗರಾಜ್ ಅರೆಹೊಳೆ ಜಂಟಿಯಾಗಿ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಔಟ್ ಆಂಡ್ ಔಟ್ ಕಮರ್ಷೀಯಲ್ ಕಾಮಿಡಿ ಥ್ರಿಲ್ಲರ್ ಚಿತ್ರವಾಗಿದ್ದು, ರತ್ನಮಾಲಾ ಬಾದರದಿನ್ನಿಯವರು ಚಿತ್ರಕ್ಕೆ ಹಣ ಹೂಡಿದ್ದಾರೆ.

ವೈಜನಾಥ ಬಿರಾದರ್ ಜೊತೆಯಾಗಿ ನೀತು, ಪ್ರೀತು ಪೂಜಾ, ಕರಿಸುಬ್ಬು, ಧರ್ಮ, ಪ್ರಶಾಂತ್ ಸಿದ್ದಿ, ಅಭಯ್ ವೀರ್, ಆರ್.ಡಿ. ಬಾಬು, ವಿವೇಕ್ ಜಂಬಗಿ, ರುದ್ರಗೌಡ ಬಾದರದಿನ್ನಿ, ಹೊಸಕೋಟೆ ಮುರುಳಿ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಕೃಷ್ಣ ನಾಯ್ಕರ್ ಅವರ ಛಾಯಾಗ್ರಹಣವಿದೆ.

ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ ಎರಡು ಹಾಡಿಗೆ ಕಿರಣ್ ಶಂಕರ್ ಸಂಗೀತ ಸಂಯೋಜಿಸಿದ್ದು, ರಾಜೇಶ್ ಕೃಷ್ಣನ್ ಅವರು ಧ್ವನಿಯಾಗಿದ್ದಾರೆ. ಉತ್ತರ ಕರ್ನಾಟಕದ ನಾಟಿ ಶೈಲಿಯ ಹಾಡಿಗೆ 'ಚುಟುಚುಟು ...' ಖ್ಯಾತಿಯ ಶಿವು ಭೆರ್ಗಿ ಸಾಹಿತ್ಯ ಬರೆದು, ಸಂಗೀತ ನೀಡಿದ್ದಾರೆ. ಈ ಹಾಡಿಗೆ ರವೀಂದ್ರ ಸೋರಗಾಂವಿ ಮತ್ತು ಶಮಿತಾ ಮಲ್ನಾಡ್ ಧ್ವನಿಯಾಗಿದ್ದಾರೆ. ಭೂಷಣ್ ನೃತ್ಯ ನಿರ್ದೇಶನದಲ್ಲಿ ಈ ಹಾಡುಗಳನ್ನು ಚಿತ್ರೀಕರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net