ಸಂಚಾರಿ ವಿಜಯ್​ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

sanchari vijay
Published on

ಬೆಂಗಳೂರು: ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ ಸಂಚಾರಿ ವಿಜಯ್​ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಕನ್ನಡದಲ್ಲೇ ಟ್ವೀಟ್​ ಮಾಡಿದೆ.

''ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್​ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ 'ಪ್ರೈಡ್​' ತಿಂಗಳ ಆಚರಣೆಯ ಅಂಗವಾಗಿ ತೃತೀಯ ಲಿಂಗಿಗಳ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ 'ನಾನು ಅವನಲ್ಲ, ಅವಳು' ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದರು ಸಂಚಾರಿ ವಿಜಯ್‌. ಆರ್​ಐಪಿ'' ಎಂದು ಟ್ವೀಟ್​ ಮೂಲಕ ಅಮೆರಿಕಾ ರಾಯಭಾರ ಕಚೇರಿ ಸಂತಾಪ ತಿಳಿಸಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್​ ಅಗಲಿಕೆ ಕನ್ನಡ ಸಿನಿಮಾ ಲೋಕಕ್ಕೆ ತುಂಬಲಾರದ ನಷ್ಟ. ಇವರ ನಿಧನಕ್ಕೆ ಸಿನಿ ರಂಗ, ಅಭಿಮಾನಿಗಳು, ಕುಟುಂಬಸ್ಥರು, ಗಣ್ಯರು ಕಂಬನಿ ಮಿಡಿದ್ದಿದ್ದಾರೆ.

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜತೆಗೆ ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net