'ಆಶಿಕಿ’ ಚಿತ್ರದ ಹಾಡುಗಳ ಮೆರವಣಿಗೆ ಶುರು ...

Aashiqui - Final
Published on

ಬೆಂಗಳೂರು: 'ಕ್ವಾಟ್ಲೆ' ಚಿತ್ರದ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಮೂಡಿಸಿದ್ದ ನಿರ್ದೇಶಕಿ ಜೆ ಚಂದ್ರಕಲ ಈಗ ಸದ್ದಿಲ್ಲದೆ ಒಂದು ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಅದೇ 'ಆಶಿಕಿ'. ಈ ಚಿತ್ರದ ಕೆಲಸಗಳು ಮುಗಿದು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಚಿತ್ರತಂಡವು, ‘ಯಾರಾ ಯಾರಾ ...’ ಎಂಬ ಹಾಡಿನ ವೀಡಿಯೋ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೂ ಮುನ್ನುಡಿ ಬರೆದಿದೆ.

ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು ಲಿಯೋ ಸಂಗೀತ ಸಂಯೋಜಿಸಿದ್ದಾರೆ. ಈಗ ಬಿಡುಗಡೆಯಾಗಿರುವ ಹಾಡಿಗೆ ಸ್ವತಃ ಚಿತ್ರದ ನಿರ್ದೇಶಕಿ ಜೆ. ಚಂದ್ರಕಲಾ ಸಾಹಿತ್ಯ ಬರೆದಿದ್ದು ಅಶ್ವಿನ್ ಶರ್ಮಾ ಧ್ವನಿಯಾಗಿದ್ದಾರೆ. ನಿತಿನ್ ಅಪ್ಪಿ ಛಾಯಾಗ್ರಾಹಣ, ನಾಗೇಂದ್ರ ಅರಸ್ ಸಂಕಲನ ಚಿತ್ರಕ್ಕಿದೆ.

'ಆಶಿಕಿ' ಚಿತ್ರವು ಒಂದು ಸಂಗೀತಮಯ ಪ್ರೇಮಕಥೆಯಾಗಿದ್ದು, ಪತ್ರಕರ್ತ ಸಂದೀಪ್​ ಕುಮಾರ್​ ನಾಯಕರಾಗಿ ಅಭಿನಯಿಸಿದ್ದಾರೆ. ಅವರಿಗೆ ನಾಯಕಿಯಾಗಿ ಐಶ್ವರ್ಯ ಸಿಂಧೋಗಿ ನಟಿಸಿದ್ದು, ಇನ್ನೊಬ್ಬ ನಾಯಕನ ಪಾತ್ರದಲ್ಲಿ ಪ್ರದೀಪ್ ಕುಮಾರ್ ನಟಿಸಿದ್ದಾರೆ. ಈ ತ್ರಿಕೋನ ಪ್ರೇಮಕಥೆಯಲ್ಲಿ ಗುರುಪ್ರಸಾದ್, ಸುಚೇಂದ್ರ ಪ್ರಸಾದ್, ತುಳಸಿ ಶಿವಮಣಿ, ಪ್ರಮೋದಿನಿ ಮುಂತಾದವರು ಅಭಿನಯಿಸಿದ್ದಾರೆ.

ಇತ್ತಿಚೆಗಷ್ಟೆ ಸೆನ್ಸಾರ್ ಮಗಿಸಿರುವ 'ಆಶಿಕಿ' ಚಿತ್ರವನ್ನು ದಸರಾ ಸಂದರ್ಭದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಅದಕ್ಕೂ ಮುನ್ನ ಇದೇ ತಿಂಗಳು ಹಾಡುಗಳು ಬಿಡುಗಡೆಯಾಗಲಿವೆ. ಶ್ರೀ ಲಕ್ಷ್ಮೀ ನರಸಿಂಹ ಮೂವೀನ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಜಿ. ಚಂದ್ರಶೇಖರ್ ಬಂಡವಾಳ ಹೂಡಿದ್ದಾರೆ.

'ಆಶಿಕಿ' ಚಿತ್ರವನ್ನು ಬೆಂಗಳೂರಲ್ಲದೆ ಕುಲು ಮನಾಲಿ, ಕೇರಳ, ಆಂಧ್ರಪ್ರದೇಶ, ಪಂಜಾಬ್, ಚಂಡೀಗಡ, ಚಿಕ್ಕಮಗಳೂರು, ಆಗ್ರಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net