ಹಿರಿಯ ನಟ ಅಮಿತಾಭ್ ಬಚ್ಚನ್​ಗೆ ಕೊವಿಡ್​-19 ಸೋಂಕು; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

Amitabh Bachan
Published on

ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರು ಇಂದು ಸಂಜೆ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ರಾತ್ರಿಯವರೆಗೂ ಅವರಿಗೆ ಏನು ಸಮಸ್ಯೆಯಾಗಿದೆ ಎಂಬುದು ಬಹಿರಂಗವಾಗಿರಲಿಲ್ಲ.

ಈಗ ಐದು ನಿಮಿಷಗಳ ಹಿಂದೆ ಅಮಿತಾಭ್​ ಬಚ್ಚನ್​ ಅವರ ಟ್ವಿಟರ್​ ಅಕೌಂಟ್​ನಿಂದ ಟ್ವೀಟ್​ ಮಾಡಲಾಗಿದೆ. ನನಗೆ ಕೊವಿಡ್​-19 ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರು, ಸಿಬ್ಬಂದಿ ಎಲ್ಲರೂ ತಪಾಸಣೆಗೆ ಒಳಪಟ್ಟಿದ್ದಾರೆ. ಅವರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಹಾಗೇ, ಕಳೆದ 10 ದಿನಗಳಲ್ಲಿ ನನ್ನನ್ನು ಭೇಟಿಯಾದ, ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಕೊವಿಡ್​-19 ಟೆಸ್ಟ್​ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೂ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net