ಮುತ್ತೋಡಿ ಕಾಡಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುತ್ತಾಟ

Darshan
Published on

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾದ ಜತೆಗೆ ಪ್ರಾಣಿ ಪಕ್ಷಿಗಳ ಮೇಲೆಯೂ ಅಷ್ಟೇ ಕಾಳಜಿ ಉಳ್ಳವರು ಎಂಬುದು ಗೊತ್ತಿರುವ ವಿಚಾರವೇ. ಬಿಡುವಿನ ವೇಳೆಯಲ್ಲಿ ಕ್ಯಾಮರಾ ಹಿಡಿದು ಕಾಡು ಸುತ್ತುವುದು ಅವರ ಇಷ್ಟದ ಕೆಲಸಗಳಲ್ಲೊಂದು. ಅದೇ ರೀತಿ ಇತ್ತೀಚೆಗೆ ಚಿಕ್ಕಮಗಳೂರಿನ ಮುತ್ತೋಡಿ ಅರಣ್ಯಕ್ಕೆ ತೆರಳಿ ಸಫಾರಿ ಮಾಡಿದ್ದಾರೆ. ಅರಣ್ಯ ಇಲಾಖೆಯ ರಾಯಭಾರಿಯೂ ಆಗಿರುವುದರಿಂದ ಆ ಭಾಗದ ಅರಣ್ಯಾಧಿಕಾರಿಗಳನ್ನೂ ಭೇಟಿ ಮಾಡಿದ್ದಾರೆ. ದರ್ಶನ್ ಆಗಮಿಸುವ ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಹೂಮಾಲೆ ಹಾಕಿ ಅವರನ್ನು ಸ್ವಾಗತಿಸಿ ಅವರ ಜತೆ ಫೋಟೋ ಸಹ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net