ಲಾಕ್​ಡೌನ್​ ಘೋಷಣೆ ಹಿನ್ನೆಲೆ; ಮನೆ ಬಾಗಿಲಿಗೆ ತರಕಾರಿ ತರುವ ರೈತರಿಗಾಗಿ ಮಿಡಿಯಿತು ದರ್ಶನ್ ಮನ

darshan_1
Published on

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್ ರೈತಪರ ಕಾಳಜಿ ಉಳ್ಳವರು ಎಂಬುದು ಗೊತ್ತಿರುವ ವಿಚಾರ. ಇದೀಗ ಕರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ​ ರೈತರ ಪರವಾಗಿ ದರ್ಶನ್​ ಮಾತನಾಡಿದ್ದಾರೆ. ಬೆಳೆದ ಬೆಳೆಯನ್ನು ನೇರವಾಗಿ ಗ್ರಾಹಕರ ಮನೆಗೆ ತಲುಪಿಸುತ್ತಿರುವ ರೈತರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿ, ದಯಮಾಡಿ ಅವರ ತರಕಾರಿ ಖರೀದಿಸಿ ಅವರನ್ನು ಉಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
"ದೇಶಾದ್ಯಂತ ಲಾಕ್ ಡೌನ್ ಘೋಷಿಸಿರುವ ಕಾರಣ ರಾಜ್ಯದೆಲ್ಲೆಡೆ ಬೇಡಿಕೆಯಿಲ್ಲದೆ ರೈತರು ತಾವು ಬೆಳೆದ ತರಕಾರಿಯನ್ನು ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳು ಇಲ್ಲದೆ ಮಾರಾಟ ಮಾಡಲು ಮುಂದಾಗಿದ್ದು ಅವರ ಬಳಿ ತರಕಾರಿ ಖರೀದಿಸುವ ಮೂಲಕ ರೈತರನ್ನು ಉಳಿಸೋಣ. ಅವರಿಗೆ ಧಕ್ಕಬೇಕಾದ ಹಣವು ಅವರ ಪಾಲಾಗಲಿ ಎಂಬುದು ನನ್ನ ಆಶಯ" ಎಂದು ಹೇಳಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net