

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸದಾ ಒಂದಿಲ್ಲೊಂದು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿರುತ್ತಾರೆ. ಆಗಾಗ ಯಾರಿಗೂ ಗೊತ್ತಾಗದಂತೆ ಸಣ್ಣ ಪುಟ್ಟ ಸೇವೆಯನ್ನೂ ಮಾಡುತ್ತ ಬರುತ್ತಿದ್ದಾರೆ. ಇದೀಗ ಶಾಲೆಯೊಂದರ ಅಭಿವೃದ್ಧಿಗೆ ದೇಣಿಗೆ ರೂಪದಲ್ಲಿ ಹಣ ನೀಡಿದ್ದಾರೆ.
ಹೌದು, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆಗೆ ಒಂದು ಲಕ್ಷ ರೂ. ನೀಡಿದ್ದಾರೆ. ಈ ಖುಷಿಯ ವಿಚಾರವನ್ನು ಸ್ವತಃ ಶಾಲೆಯೇ ಅಭಿನಂದನಾ ಪತ್ರವನ್ನು ಬಿಡುಗಡೆ ಮಾಡಿದ್ದು, ಕಲಿಕಾ ಪ್ರೋತ್ಸಾಹ ಧನದ ರೂಪದಲ್ಲಿ ಒಂದು ಲಕ್ಷ ನೀಡಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ.
ಇದನ್ನೂ ಓದಿ: ಚಿರಂಜೀವಿ ತಂಗಿ ಕೀರ್ತಿ
ಅಂದಹಾಗೆ, ಕಳೆದ ಕೆಲ ದಿನಗಳಿಂದ ಕೊಪ್ಪಳ, ಬಳ್ಳಾರಿ, ಹೊಸಪೇಟೆಯಲ್ಲಿ ಜೇಮ್ಸ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಪುನೀತ್, ಇತ್ತೀಚೆಗಷ್ಟೇ ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬಂದಿದ್ದರು. ನೂರಾರು ಮೆಟ್ಟಿಗಳನ್ನು ಏರಿ ಆಂಜನೇಯನ ದರ್ಶನ ಪಡೆದುಬಂದಿದ್ದರು. ಈಗಲೂ ಅಲ್ಲಿಯೇ ಶೂಟಿಂಗ್ ನಡೆಯುತ್ತಿದ್ದು, ಶೀಘ್ರದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ.