ಸೂಪರ್​ ಸ್ಟಾರ್​ ರಜನಿಕಾಂತ್ ಆಸ್ಪತ್ರೆಗೆ ದಾಖಲು; ಕಾವೇರಿ ಆಸ್ಪತ್ರೆಯಲ್ಲಿ ಪರೀಕ್ಷೆ

rajanikanth
Published on

ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಸಂಜೆ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿನ ವೈದ್ಯರು ರಜನಿಕಾಂತ್ ಅವರನ್ನು ವಿವಿಧ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

ಇಂದು ಸಂಜೆ 4.30ರ ಸುಮಾರಿಗೆ ಅವರು ಆಸ್ಪತ್ರೆಗೆ ತೆರಳಿದ್ದಾರೆ. ಎಂದಿನಂತೆ ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net