

ಮುಂಬೈ: ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಅವರಿಗೆ ಕರೊನಾವೈರಸ್ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಟ್ವಿಟ್ಟರ್ನಲ್ಲಿ ಈ ವಿಷಯ ತಿಳಿಸಿರುವ ಅವರು, ಸೆಲ್ಪ್ ಕ್ವಾರಂಟೈನ್ಗೆ ಒಳಗಾಗಿದ್ದೇನೆ ಎಂದು ತಿಳಿಸಿದ್ದಾರೆ.
ತಮ್ಮ ಅಭಿಮಾನಿಗಳಿಗೆ ಹಾಗೂ ಬೆಂಬಲಿಗರಿಗೆ ಯಾವುದೇ ಭಯ ಬೇಡ ಎಂದು ಮನವಿ ಮಾಡಿರುವ ಅವರು ಸುರಕ್ಷತೆ ಪಾಲಿಸಿ ಎಂದು ಕರೆ ನೀಡಿದ್ದಾರೆ. ನಿಮ್ಮೆಲ್ಲರ ಸಂಕಷ್ಟಗಳಿಗೆ ನಾನು ಜೊತೆಯಾಗಿರುತ್ತೇನೆ ಎಂದು ಹೇಳಿದ್ದಾರೆ.
ತಮ್ಮ ನಟನೆ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಸೋನು, ಇತ್ತೀಚೆಗೆ ತೊಂದರೆಯಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ತಮ್ಮ ಮಾನವೀಯ ಗುಣಗಳಿಂದ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.