

Actress Childhood Photo : ಸಿನಿಪ್ರಿಯರಿಗೆ ಹೀರೋ ಮತ್ತು ಹೀರೋಯಿನ್ಗಳ ವೈಯಕ್ತಿಕ ಮಾಹಿತಿ ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಅವರು ಬಳಸುವ ಕಾರುಗಳು, ದಿನನಿತ್ಯ ಜೀವನದಲ್ಲಿ ಅವರ ಹವ್ಯಾಸಗಳು, ಧರಿಸುವ ಬಟ್ಟೆ, ಮೊಬೈಲ್ ಹಾಗೂ ವಾಚ್ ಬೆಲೆ ಎಷ್ಟು? ವಾಸಿಸುವ ಮನೆ ಎಷ್ಟು ಬೆಲೆ ಬಾಳುತ್ತದೆ? ಮತ್ತು ಯಾವ ಯಾವ ವಸ್ತುಗಳನ್ನು ಆಗಾಗ ಬಳಕೆ ಮಾಡುತ್ತಾರೆ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳಲು ಬಯಸುತ್ತಾರೆ. ಇದಿಷ್ಟೇ ಅಲ್ಲದೆ, ಬಾಲ್ಯದಲ್ಲಿ ಹೇಗಿದ್ದರು? ಸಿನಿಮಾಗೆ ಬರುವ ಮುಂಚೆ ಹೇಗೆ ಕಾಣುತ್ತಿದ್ದರು ಎಂದು ತಿಳಿದುಕೊಳ್ಳುವ ಕುತೂಹಲವೂ ಜಾಸ್ತಿ ಇರುತ್ತದೆ.
ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಪುಟ್ಟ ಹುಡುಗಿಯ ಫೋಟೋವೊಂದು ವೈರಲ್ ಆಗಿದೆ. ಆ ಬಾಲಕಿ ಯಾರೆಂದು ತಿಳಿದು ನೆಟ್ಟಿಗರು ಒಂದು ಕ್ಷಣ ಹುಬ್ಬೇರಿಸಿದ್ದಾರೆ. ಏಕೆಂದರೆ, ವೈರಲ್ ಫೋಟೋದಲ್ಲಿರುವುದು ಬೇರೆ ಯಾರೂ ಅಲ್ಲ ಅನೇಕ ಯುವಕರನ್ನು ತಮ್ಮ ಸಹಜ ಸೌಂದರ್ಯದಿಂದಲೇ ಮರಳು ಮಾಡಿರುವ ಮಲಯಾಳಂ ಬೆಡಗಿ ಸಾಯಿ ಪಲ್ಲವಿ.
ಸಾಯಿ ಪಲ್ಲವಿ... ಈ ಹೆಸರು ಸರಳವಾಗಿರುವ ಹೆಣ್ಣು ಮಕ್ಕಳನ್ನು ಇಷ್ಟಪಡುವ ಹುಡುಗರ ಎದೆಬಡಿತವನ್ನು ಹೆಚ್ಚಿಸುತ್ತದೆ. ಸೌತ್ ಸಿನಿಮಾಗಳಲ್ಲಿ ನಟಿ ಸಾಯಿ ಪಲ್ಲವಿ ಅವರ ಹೆಸರು ತೆಗೆದರೆ ಸಾಕು, ಕೇವಲ ಅವರ ಸೂಪರ್ ಹಿಟ್ ಸಿನಿಮಾಗಳಿಗೆ ಅಲ್ಲದೇ ಹಲವಾರು ಕುತೂಹಲಕಾರಿ ವಿಷಯಗಳ ಬಗ್ಗೆ ಜನ ಚರ್ಚಿಸುತ್ತಾರೆ. ಡಿ-ಗ್ಲಾಮರಸ್ ರೋಲ್, ಸರಳತೆ, ನೋ-ಮೇಕಪ್ ಲುಕ್, ಒಳ್ಳೆಯ ಚಿತ್ರಗಳ ಆಯ್ಕೆಗೆ ನಟಿ ಸಾಯಿ ಪಲ್ಲವಿ ಹೆಸರುವಾಸಿ. ಜೊತೆಗೆ, ಹಲವು ದೊಡ್ಡ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸಲು ನಿರಾಕರಿಸಿ ವಿವಾದಗಳಿಗೂ ತುತ್ತಾಗಿದ್ದಾರೆ. ಅಲ್ಲದೆ, ಜನರ ನಂಬಿಕೆಗೆ ದ್ರೋಹ ಮಾಡುವ ಜಾಹೀರಾತುಗಳನ್ನು ನಿರಾಕರಿಸಿ ಜನರ ಮೆಚ್ಚಿಗೆಗೂ ಪಾತ್ರರಾಗಿದ್ದಾರೆ.
ಸಾಯಿ ಪಲ್ಲವಿ ನಟನೆಯ ಅಮರನ್ ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಆಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈ ಚಿತ್ರವನ್ನು ಎಲ್ಲರು ಮೆಚ್ಚಿ ಕೊಂಡಾಡುತ್ತಿದ್ದಾರೆ. ಅದರಲ್ಲೂ ಸಾಯಿ ಪಲ್ಲವಿ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ. ಹೀಗಾಗಿ ಜಾಲತಾಣದಲ್ಲಿ ಎಲ್ಲರೂ ಸಾಯಿ ಪಲ್ಲವಿ ಬಗ್ಗೆ ಮಾತನಾಡುತ್ತಿದ್ದಾರೆ. ಸದ್ಯ ಸೌತ್ ಬ್ಯೂಟಿ ಟ್ರೆಂಡಿಂಗ್ನಲ್ಲಿದ್ದು, ಆಕೆಯ ಬಾಲ್ಯದ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಯಿ ಪಲ್ಲವಿಯ ಬಾಲ್ಯದ ಫೋಟೋವನ್ನು ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಸಿನಿಮಾ ವಿಚಾರಕ್ಕೆ ಬರುವುದಾದರೆ, ಅಮರನ್ ಯಶಸ್ಸಿನ ಬಳಿಕ ಸಾಯಿ ಪಲ್ಲವಿ ಅವರು ಹೊಸ ಚಿತ್ರ ‘ತಾಂಡೇಲ್’ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಚಿತ್ರದಲ್ಲಿ ನಾಗ ಚೈತನ್ಯ ನಾಯಕನಾಗಿ ನಟಿಸುತ್ತಿದ್ದಾರೆ. ‘ಲವ್ ಸ್ಟೋರಿ’ ನಂತರ ಈ ಜೋಡಿ ಮತ್ತೆ ತೆರೆಯ ಮೇಲೆ ಒಂದಾಗುತಿದೆ. ಇಬ್ಬರ ನಡುವಿನ ಕೆಮಿಸ್ಟ್ರಿಯನ್ನು ಮತ್ತೊಮ್ಮೆ ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. (ಏಜೆನ್ಸೀಸ್)