ಈ ಚಿತ್ರದಲ್ಲಿರುವ ಪುಟ್ಟ ಬಾಲಕಿ ಯಾರು ಗೊತ್ತಾ? ಸುದೀಪ್​ ಜತೆ ಸೂಪರ್​ ಹಿಟ್​ ಸಿನಿಮಾದಲ್ಲಿ ನಟಿಸಿದ್ದಾರೆ! Actress Childhood Photo

Actress Childhood Photo
Published on

Actress Childhood Photo : ಸಿನಿಪ್ರಿಯರಿಗೆ ಹೀರೋ ಮತ್ತು ಹೀರೋಯಿನ್​ಗಳ ವೈಯಕ್ತಿಕ ಮಾಹಿತಿ ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಅವರು ಬಳಸುವ ಕಾರುಗಳು, ದಿನನಿತ್ಯ ಜೀವನದಲ್ಲಿ ಅವರ ಹವ್ಯಾಸಗಳು, ಧರಿಸುವ ಬಟ್ಟೆ, ಮೊಬೈಲ್​ ಹಾಗೂ ವಾಚ್​ ಬೆಲೆ ಎಷ್ಟು? ವಾಸಿಸುವ ಮನೆ ಎಷ್ಟು ಬೆಲೆ ಬಾಳುತ್ತದೆ? ಮತ್ತು ಯಾವ ಯಾವ ವಸ್ತುಗಳನ್ನು ಆಗಾಗ ಬಳಕೆ ಮಾಡುತ್ತಾರೆ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳಲು ಬಯಸುತ್ತಾರೆ. ಇದಿಷ್ಟೇ ಅಲ್ಲದೆ, ಬಾಲ್ಯದಲ್ಲಿ ಹೇಗಿದ್ದರು? ಸಿನಿಮಾಗೆ ಬರುವ ಮುಂಚೆ ಹೇಗೆ ಕಾಣುತ್ತಿದ್ದರು ಎಂದು ತಿಳಿದುಕೊಳ್ಳುವ ಕುತೂಹಲವೂ ಜಾಸ್ತಿ ಇರುತ್ತದೆ.

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಟೋವೊಂದು ವೈರಲ್​ ಆಗಿದೆ. ಆ ಫೋಟೋದಲ್ಲಿ ಮುದ್ದಾದ ಬಾಲಕಿ ಇದ್ದಾಳೆ. ಈಕೆ ಸಾಮಾನ್ಯ ಬಾಲಕಿ ಅಲ್ಲ, ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಪ್ರವೇಶಿಸಿ, ಇಂದು ಸ್ಟಾರ್​ ನಟಿಯಾಗಿದ್ದಾರೆ. ಕನ್ನಡದಲ್ಲಿ ನಾಯಕಿಯಾಗಿ ಪಾದಾರ್ಪಣೆ ಮಾಡಿ ಹಲವಾರು ಮಲಯಾಳಂ ಚಿತ್ರಗಳಲ್ಲಿ ನಟಿಸಿದರು.

ಈ ಫೋಟೋದಲ್ಲಿರುವುದು ಯಾರೆಂದು ಇನ್ನೂ ನಿಮಗೆ ನೆನಪಿಗೆ ಬರುತ್ತಿಲ್ಲವೇ? ಈಕೆ ರಾಷ್ಟ್ರ ಪ್ರಶಸ್ತಿ ಕೂಡ ಸ್ವೀಕರಿಸಿದ್ದಾರೆ. ಕನ್ನಡದಲ್ಲಿ ನಟ ಸುದೀಪ್​ ಜೊತೆ ಸೂಪರ್​ ಹಿಟ್​ ಸಿನಿಮಾದಲ್ಲಿ ನಟಿಸಿದ್ದಾರೆ. ತಮ್ಮ ವೈವಿಧ್ಯಮಯ ಪಾತ್ರಗಳಿಂದ ತಮ್ಮದೇಯಾದ ಒಂದು ವಿಶಿಷ್ಟ ಗುರುತನ್ನು ಗಳಿಸಿದ್ದಾರೆ. ಇತ್ತೀಚೆಗೆ ವಿಜಯ್​ ಸೇತುಪತಿ ನಟಿಸಿದ ಅವರ ಸಿನಿಮಾ ಬಿಡುಗಡೆಯಾಯಿತು. ಧನುಷ್​ ಜೊತೆ ನಟಿಸಿರುವ ಅವರ ಮುಂದಿನ ಚಿತ್ರ ಬಿಡುಗಡೆ ಸಿದ್ಧವಾಗುತ್ತಿದೆ. ಇಷ್ಟೆಲ್ಲ ಸುಳಿವು ನೀಡಿದರೂ ಅವರು ಯಾರೆಂದು ಗೊತ್ತಾಗುತ್ತಿಲ್ಲವೇ? ಹಾಗಾದರೆ, ಮುಂದೆ ಉತ್ತರ ಸಿಗಲಿದೆ.

ಅಂದಹಾಗೆ, ಈ ಮೇಲಿನ ಫೋಟೋದಲ್ಲಿರುವುದು ಬೇರೆ ಯಾರೂ ಅಲ್ಲ ಸೌತ್​ ಬ್ಯೂಟಿ ನಿತ್ಯಾ ಮೆನನ್​. ಇವರ ಬಗ್ಗೆ ವಿಶೇಷ ಪರಿಚಯದ ಅಗತ್ಯವಿಲ್ಲ. ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ನಾಯಕಿಯರಲ್ಲಿ ನಿತ್ಯಾ ಕೂಡ ಒಬ್ಬರು. ಕರ್ನಾಟಕದ ಬೆಂಗಳೂರಿನಲ್ಲಿ ಜನಿಸಿದ ನಿತ್ಯಾ, ತಮ್ಮ ವೈವಿಧ್ಯಮಯ ಪಾತ್ರಗಳಿಂದ ತಮ್ಮದೇಯಾದ ಒಂದು ವಿಶಿಷ್ಟ ಗುರುತನ್ನು ಗಳಿಸಿದ್ದಾರೆ.

Nithya Menen

ನಿತ್ಯಾ ಕೇವಲ ಒಂದು ಸಿನಿಮಾ ರಂಗಕ್ಕೆ ಸೀಮಿತವಾಗಿಲ್ಲ. ಟಾಲಿವುಡ್​, ಕಾಲಿವುಡ್​, ಸ್ಯಾಂಡಲ್​ವುಡ್​ ಹಾಗೂ ಮಾಲಿವುಡ್​ನಲ್ಲಿ ನಿತ್ಯಾ ಸಿಕ್ಕಾಪಟ್ಟೆ ಹೆಸರು ಮಾಡಿದ್ದಾರೆ. ಕನ್ನಡದಲ್ಲಿ ಜೋಶ್​, ಮೈನಾ ಹಾಗೂ ಕೋಟಿಗೊಬ್ಬ 2 ಚಿತ್ರದಲ್ಲಿ ನಟಿಸುವ ಮೂಲಕ ಕನ್ನಡಿಗರ ಮನದಲ್ಲಿ ಮನೆ ಮಾಡಿದ್ದಾರೆ. ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವ ನಿತ್ಯಾ, ಕನ್ನಡಿಗರಿಗೂ ಅಚ್ಚುಮೆಚ್ಚು. ನಿತ್ಯಾ ಮೆನನ್ ಅವರು ತಮ್ಮ ವಿಭಿನ್ನ ಪಾತ್ರಗಳ ಮೂಲಕವೇ ಚಿತ್ರರಂಗದಲ್ಲಿ ವಿಶಿಷ್ಟವಾದ ಗುರುತನ್ನು ಮೂಡಿಸಿದ್ದಾರೆ. ಹೀರೋ ಯಾರೇ ಆಗಿರಲಿ, ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ನಿತ್ಯಾ ಮೆನನ್ ಪ್ರಾಮುಖ್ಯತೆ ನೀಡುತ್ತಾರೆ. ಅಲ್ಲದೆ, ನಿತ್ಯಾ ನಟಿಸಿದ ಅನೇಕ ಸಿನಿಮಾಗಳಲ್ಲಿ ಅವರ ಪಾತ್ರವೇ ಪ್ರೇಕ್ಷಕರನ್ನು ಹೆಚ್ಚು ಗಮನ ಸೆಳೆದಿದೆ. ಇನ್ನು ಸಿನಿಮಾ ದೊಡ್ಡದಾದಷ್ಟೂ ಸಂಭಾವನೆ ಕೂಡ ಹೆಚ್ಚುತ್ತದೆ ಎಂಬ ಕಾರಣಕ್ಕೆ ದೊಡ್ಡ ಚಿತ್ರಗಳನ್ನು ನಿತ್ಯಾ ಒಪ್ಪುವುದಿಲ್ಲ. ತಮ್ಮ ಪಾತ್ರಕ್ಕೆ ಆದ್ಯತೆ ನೀಡಿದರೆ ಮಾತ್ರ ಅದರಲ್ಲಿ ನಟಿಸುತ್ತಾರೆ. ಹೀಗಾಗಿ ತಾನು ನಿರ್ವಹಿಸಿದ ಪಾತ್ರಗಳಿಗೆ ಸಾಕಷ್ಟು ಚಪ್ಪಾಳೆ ಗಿಟ್ಟಿಸಿದ್ದಾರೆ.

2022 ರಲ್ಲಿ ತೆರೆಕಂಡ ತಮಿಳು ಚಿತ್ರರಂಗದ ಬ್ಲಾಕ್‌ಬಸ್ಟರ್ ಹಿಟ್ 'ತಿರುಚಿತ್ರಂಬಲಂ' ಚಿತ್ರದಲ್ಲಿ ನಿತ್ಯಾ ಮೆನನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದರಲ್ಲಿ ಅವರು ಧನುಷ್ ಅವರ ಬಾಲ್ಯದ ಗೆಳತಿಯಾಗಿ ಬಳಿಕ ಪ್ರೇಮಿಯಾಗಿ ಅಮೋಘ ನಟನೆಯ ಮೂಲಕ ಪ್ರೇಕ್ಷಕರ ಹೃದಯಗಳನ್ನು ಗೆದ್ದರು. ಈ ಚಿತ್ರವು ನೂರು ಕೋಟಿ ರೂಪಾಯಿಗಳಿಗೂ ಹೆಚ್ಚು ಗಳಿಕೆ ಮಾಡಿತು. ಅಷ್ಟೇ ಅಲ್ಲ, ಈ ಚಿತ್ರಕ್ಕೆ ನಿತ್ಯಾ ಮೆನನ್​ ಅವರಿಗೆ ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತು.

Nithya Menen

ಅಂದಹಾಗೆ, ನಿತ್ಯಾ ಮೆನನ್​ ಅವರ ಮುಂದಿನ ಸಿನಿಮಾ ‘ಇಡ್ಲಿ ಕಡೈ’. ಇದನ್ನು ಧನುಷ್ ನಿರ್ದೇಶಿಸಿದ್ದು, ಸ್ವತಃ ಅವರೇ ನಿರ್ಮಾಣ ಮಾಡಿದ್ದಾರೆ. ಇದೊಂದು ಫ್ಯಾಮಿಲಿ ಡ್ರಾಮಾ ಚಿತ್ರ. ನಿತ್ಯ ಮೆನನ್ ಮತ್ತು ಧನುಷ್ ಅವರಲ್ಲದೆ, ಇಡಲಿ ಕಡೈ ಚಿತ್ರದಲ್ಲಿ ಅರುಣ್ ವಿಜಯ್, ಶಾಲಿನಿ ಪಾಂಡೆ, ಸತ್ಯರಾಜ್, ಪಾರ್ತಿಪನ್ ಮತ್ತು ಸಮುದ್ರಕನಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದಾರೆ. 2022 ರ ‘ತಿರುಚಿತ್ರಾಂಬಲಂ’ ಚಿತ್ರದ ನಂತರ ಧನುಷ್ ಮತ್ತು ನಿತ್ಯಾ ಮೆನನ್ ಒಂದಾಗುತ್ತಿರುವ ಎರಡನೇ ಚಿತ್ರ ಇದಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net