

ವಿಜಯವಾಣಿ ಸುದ್ದಿಜಾಲ ಬೆಂಗಳೂರು
‘ಜೊತೆಜೊತೆಯಲಿ’ ಧಾರಾವಾಹಿಯ ಬಳಿಕ ನಟಿ ಮೇಘಾ ಶೆಟ್ಟಿ ‘ತ್ರಿಬಲ್ ರೈಡಿಂಗ್’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಪದಾರ್ಪಣೆ ಮಾಡಿದರು. ನಂತರ ‘ದಿಲ್‌ಪಸಂದ್’ ಚಿತ್ರದಲ್ಲಿ ನಟಿಸಿದ ಅವರು, ಸದ್ಯ ಮೂರ್ನಾಲ್ಕು ಚಿತ್ರಗಳಲ್ಲಿ ಬಿಜಿಯಿದ್ದಾರೆ. ಅವುಗಳಲ್ಲಿ ಜಯತೀರ್ಥ ನಿರ್ದೇಶನದ ‘ಕೈವ’ ಇಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಅದೇ ಖುಷಿಯಲ್ಲಿ ಮೇಘಾ, ತಮ್ಮ ಪಾತ್ರ, ಸಿದ್ದತೆ, ಸವಾಲು, ಮುಂದಿನ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ.