ನಟಿ ಪೂಜಾ ಹೆಗ್ಡೆಗೆ ಕರೊನಾ ಪಾಸಿಟಿವ್; ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್

Pooja
Published on

ಕಳೆದ ಕೆಲವು ದಿನಗಳಲ್ಲಿ ಆಲಿಯಾ ಭಟ್, ರಣಬೀರ್ ಕಪೂರ್, ಆಮೀರ್ ಖಾನ್, ಅಕ್ಷಯ್ ಕುಮಾರ್, ಕತ್ರಿನಾ ಕೈಫ್ ಸೇರಿದಂತೆ ಬಾಲಿವುಡ್​ನ ಹಲವು ನಟ-ನಟಿಯರಿಗೆ ಕರೊನಾ ಸೋಂಕು ತಗುಲಿದ್ದು, ಆ ಸಾಲಿಗೆ ಪೂಜಾ ಹೆಗ್ಡೆ ಸಹ ಸಹ ಸೇರಿಕೊಂಡಿದ್ದಾರೆ. ಪೂಜಾಗೆ ಕರೊನಾ ಪಾಸಿಟಿವ್ ಆಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿರುವ ಅವರು, ‘ನನಗೆ ಕರೊನಾ ಪಾಸಿಟಿವ್ ಆಗಿದ್ದು, ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರೆಲ್ಲ ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ’ಎಂದು ಪೂಜಾ ಹೇಳಿದ್ದಾರೆ. ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ತಮ್ಮ ಆರೋಗ್ಯ ವಿಚಾರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿರುವ ಪೂಜಾ, ತಾವು ಆದಷ್ಟು ಬೇಗ ಗುಣಮುಖರಾಗಿ ವಾಪಸ್ಸು ಬರುವುದಾಗಿ ಹೇಳಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net