

ಚೆನ್ನೈ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್ ಮಾಡುವ ಚಾಳಿ ಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ನಟಿಯರ ಮನಸ್ಸು ಕದಡುವಂತಹ ಕಾಮೆಂಟ್ ಮಾಡುವುದು ಕೆಲ ನೆಟ್ಟಿಗರಿಗೆ ಅಭ್ಯಾಸವಾಗಿದೆ. ಒಂದಿಷ್ಟು ನಟಿಯರು ಕಾಮೆಂಟ್ಗಳನ್ನು ನಿರ್ಲಕ್ಷಿಸಿದರೆ, ಇನ್ನೊಂದಿಷ್ಟು ನಟಿಯರು ಯಾವುದೇ ಕಾಮೆಂಟ್ ಅಥವಾ ಪ್ರಶ್ನೆಗಳಿಗೆ ತಕ್ಕ ಉತ್ತರ ನೀಡುವುದನ್ನು ನೋಡಿದ್ದೇವೆ. ಅದೇ ರೀತಿ ಇದೀಗ ಕಾಲಿವುಡ್ನ ನಟಿಯೊಬ್ಬರು ನೆಟ್ಟಿಗನೊಬ್ಬ ಕೇಳಿದ ವೈಯಕ್ತಿಕ ಪ್ರಶ್ನೆಗೆ ಖಡಕ್ ಉತ್ತರವನ್ನು ನೀಡಿದ್ದಾರೆ.
ತಮಿಳಿನ ಸೂಪರ್ ಹಿಟ್ "ವರೂತಪದತ ವಾಲಿಬರ್ ಸಂಗಮ" ಸಿನಿಮಾದ ನಟಿಸಿದ ಬಳಿಕ ಖ್ಯಾತಿಯನ್ನು ಹೆಚ್ಚಿಕೊಂಡಿರುವ ನಟಿ ಶಾಲೂ ಶಾಮು, ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೇಗಡಿ, ತಮಿಳುಕು ನುಮಾ ಉತ್ಸುತ್, ಮಿಸ್ಟರ್ ಲೋಕಲ್ ಸೇರಿದಂತೆ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಸಿನಿಮಾಗಳಿಗಿಂತ ಸಾಮಾಜಿಕ ಜಾಲತಾಣದಲ್ಲಿ ಶಾಲೂ ಹೆಚ್ಚು ಸದ್ದು ಮಾಡುತ್ತಿರುತ್ತಾರೆ.
ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಶಾಲೂ, ಇನ್ಸ್ಟಾಗ್ರಾಂನಲ್ಲಿ 8 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಯಾವಾಗಲೂ ತಮ್ಮ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡುಗರ ಮೈ ಬಿಸಿ ಏರಿಸುತ್ತಿರುತ್ತಾರೆ. ಅವರ ಇನ್ಸ್ಟಾಗ್ರಾಂ ಪೂರ್ತಿ ಗ್ಲಾಮರಸ್ ಫೋಟೋಗಳೇ ತುಂಬಿ ಹೋಗಿವೆ.
ಇತ್ತೀಚೆಗೆ ಶಾಲೂ ಅವರು ತಮ್ಮ ಫಾಲೋವರ್ಸ್ ಜತೆ ಪ್ರಶ್ನೋತ್ತರ ಸಂವಾದ ನಡೆಸಿದ್ದರು. ಈ ವೇಳೆ ನೆಟ್ಟಿಗನೊಬ್ಬ ಅಶ್ಲೀಲ ಪ್ರಶ್ನೆಯನ್ನು ಕೇಳಿದ್ದಾನೆ. ಆದರೂ ಈ ಪ್ರಶ್ನೆಗೆ ಮುಜುಗರಪಟ್ಟುಕೊಳ್ಳದ ಶಾಲೂ ಖಡಕ್ ಉತ್ತರ ಮೂಲಕ ನೆಟ್ಟಿಗನಿಗೆ ತಿರುಗೇಟು ನೀಡಿದ್ದಾರೆ. "ನಿಮ್ಮ ಸ್ತನಗಳ ಗಾತ್ರ ಎಷ್ಟು" ಎಂದು ನೆಟ್ಟಿಗ ಪ್ರಶ್ನೆ ಮಾಡಿದ್ದ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಲೂ ಖಂಡಿತವಾಗಿಯೂ ನಿಮಗಿಂತಲೂ ದೊಡ್ಡದು ಎಂದಿದ್ದಾರೆ.
ಪ್ರಶ್ನೆಯ ಸ್ಕ್ರೀನ್ಶಾಟ್ ಅನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದು, ಇದೀಗ ಭಾರೀ ವೈರಲ್ ಆಗಿದೆ. ಅಶ್ಲೀಲ ಪ್ರಶ್ನೆ ಕೇಳಿದ ನೆಟ್ಟಿಗನಿಗೆ ಉಳಿದ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. (ಏಜೆನ್ಸೀಸ್)