ಕರೊನಾ ನೆಗೆಟಿವ್​: ಆಸ್ಪತ್ರೆಯಿಂದ ಐಶ್ವರ್ಯಾ ಮತ್ತು ಆರಾಧ್ಯಾ ಡಿಸ್ಚಾರ್ಜ್​

Aishwarya Rai and Aradhya - Final
Published on

ಕರೊನಾದಿಂದ ಕಳೆದ ವಾರ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತು ಅವರ ಪುತ್ರಿ ಆರಾಧ್ಯಾ, ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಈ ಕುರಿತು ಐಶ್ವಯಾ ರೈ ಅವರ ಪತಿ ಅಭಿಷೇಕ್​ ಬಚ್ಚನ್​ ಟ್ವೀಟ್​ ಮಾಡಿದ್ದು, ಎಲ್ಲರ ಶುಭ ಹಾರೈಕೆಗಳೊಂದಿಗೆ ಐಶ್ವರ್ಯಾ ಮತ್ತು ಆರಾಧ್ಯಾ ಇಬ್ಬರೂ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿರುವ ಬಗ್ಗೆ ತಿಳಿಸಿದ್ದಾರೆ.

ಸುಮಾರು ಹತ್ತು ದಿನಗಳ ಹಿಂದೆ, ಐಶ್ವರ್ಯಾ ಮತ್ತು ಆರಾಧ್ಯ ಇಬ್ಬರನ್ನೂ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಕ್ಕೂ ಮುನ್ನ, ಅಂದರೆ ಜುಲೈ 12ರಂದು ಐಶ್ವರ್ಯಾ ಮತ್ತು ಆರಾಧ್ಯಾಗೆ ಟೆಸ್ಟ್​ ಮಾಡಿದ್ದಾಗ, ಇಬ್ಬರಿಗೂ ಕರೊನಾ ಪಾಸಿಟಿವ್​ ಪತ್ತೆಯಾಗಿತ್ತು. ಈ ಸಂಬಂಧ ಅವರಿಬ್ಬರಿಗೂ ಹೋಂ ಕ್ವಾರಂಟೈನ್​ನಲ್ಲಿ ಚಿಕಿತ್ಸೆ ನೀಡಲಾಗುತಿತ್ತು.

ಆದರೆ, ಹತ್ತು ದಿನಗಳ ಹಿಂದೆ ಐಶ್ವರ್ಯಾ ಮತ್ತು ಆರಾಧ್ಯಗೆ ಪರೀಕ್ಷೆ ಮಾಡಿದಾಗ, ಮತ್ತೊಮ್ಮೆ ಪಾಸಿಟಿವ್​ ಅವರಿಬ್ಬರನ್ನೂ ನಾನಾವತಿ ಆಸ್ಪತ್ರೆಗೆ ದಾಖಲಾಗಿತ್ತು. ಈಗ ಅವರಿಬ್ಬರೂ ಸಂಪೂರ್ಣವಾಗಿ ಗುಣಮುಖರಾಗಿರುವ ಕಾರಣ, ಇಬ್ಬರನ್ನೂ ಡಿಸ್ಚಾರ್ಜ್​ ಮಾಡಲಾಗಿದೆ ಎಂದು ಹೇಳಲಾಗಿದೆ.

ಒಂದು ಕಡೆ, ಐಶ್ವರ್ಯಾ ಮತ್ತು ಆರಾಧ್ಯಾ ಇಬ್ಬರೂ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಬಂದರೆ, ಅವರಿಗಿಂಥ ಮುಂಚೆ ಕರೊನಾ ಪಾಸಿಟಿವ್​ ಹಿನ್ನೆಲೆಯಲ್ಲಿ ದಾಖಲಾದ ಅಮಿತಾಭ್​ ಬಚ್ಚನ್​ ಮತ್ತು ಅಭಿಷೇಕ್​ ಬಚ್ಚನ್​ ಇಬ್ಬರೂ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಬ್ಬರೂ ಅತೀ ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net