ಪ್ರಭಾಸ್​, ದೀಪಿಕಾ ಸಿನಿಮಾಕ್ಕೆ ಬಿಗ್​ಬಿ ಅಮಿತಾಬ್​ ಬಚ್ಚನ್ ಎಂಟ್ರಿ

123
Published on

ಹೈದರಾಬಾದ್​: ಟಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆ ವೈಜಯಂತಿ ಸಿನಿಮಾಸ್​ ಸದ್ಯ ಭಾರೀ ಸುದ್ದಿಯಲ್ಲಿದೆ. ಬಿಗ್​ ಬಜೆಟ್​ನ ಸಿನಿಮಾ ಘೋಷಣೆ ಮಾಡಿಕೊಂಡು ಸ್ಟಾರ್​ ಕಲಾವಿದರನ್ನೇ ಆಯ್ದುಕೊಂಡು ಸುದ್ದಿಯಲ್ಲಿದೆ. ಈಗಾಗಲೇ ಪ್ರಭಾಸ್ ಮತ್ತು ದೀಪಿಕಾ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರಕ್ಕೀಗ ಲೆಜಂಡರಿ ಸ್ಟಾರ್ ನಟ ಎಂಟ್ರಿಕೊಟ್ಟಿದ್ದಾರೆ.

ಹೌದು, ಆ ನಟ ಬೇರಾರು ಅಲ್ಲ, ಬಾಲಿವುಡ್​ ಬಿಗ್​ ಬಿ ಅಮಿತಾಬ್​ ಬಚ್ಚನ್​! ಈ ವಿಚಾರವನ್ನು ಸ್ವತಃ ನಿರ್ಮಾಣ ಸಂಸ್ಥೆಯೇ ಘೋಷಿಸಿಕೊಂಡಿದ್ದು, ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಶೀರ್ಷಿಕೆ ಏನು, ಶೂಟಿಂಗ್ ಯಾವಾಗ ಎಂಬುದರ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಹಲವು ಸಿನಿಮಾಗಳಲ್ಲಿ ಪ್ರಭಾಸ್ ಮತ್ತು ದೀಪಿಕಾ ಬಿಜಿಯಾಗಿದ್ದು, 2021ರಲ್ಲಿಯೇ ಈ ಸಿನಿಮಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ವೈಜಯಂತಿ ಸಿನಿಮಾಸ್ ಸಂಸ್ಥೆ ನಿರ್ಮಾಣ ಮಾಡಲಿದ್ದು, ದಕ್ಷಿಣ ಭಾರತದ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಇದೂ ಒಂದಾಗಿದೆ. ಇದೇ ಸಂಸ್ಥೆ 50ನೇ ವಾರ್ಷಿಕೋತ್ಸವದ ಆಚರಣೆಯಲ್ಲಿದ್ದು, ಆ ಸಂಭ್ರಮಕ್ಕೆ ಈ ಸಿನಿಮಾ ಘೋಷಣೆ ಮಾಡಿದ್ದು, ದೀಪಿಕಾ ಬಳಿಕ ಅಮಿತಾಬ್​ ಅವರನ್ನು ಕರೆತಂದಿದೆ. ಮಹಾನಟಿ ಸಿನಿಮಾ ನಿರ್ದೇಶನ ಮಾಡಿದ್ದ ನಿದೇಶಕ ನಾಗ್​ ಅಶ್ವಿನ್​ ಈ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net